ಬೆಳಗಾವಿ ಗ್ರಾಮೀಣ ಕ್ಷೇತ್ರದ ಬೆಳಗುಂದಿಯ ವಿಜಯಪುರದ ಶ್ರೀ ಸಿದ್ದೇಶ್ವರ ಸ್ವಾಮೀಜಿಯವರ ವಿಶ್ರಾಂತ ಆಶ್ರಮಕ್ಕೆ ಕೃಷಿ ಸಚಿವರಾದ ಚಲುವರಾಯಸ್ವಾಮಿ ಅವರೊಂದಿಗೆ ಭೇಟಿ ನೀಡಲಾಯಿತು.
ಶ್ರೀ ಸಿದ್ದೇಶ್ವರ ಸ್ವಾಮೀಜಿಗಳು ಆಧ್ಯಾತ್ಮದ ಬಗ್ಗೆ ಬಹಳ ಆಳವಾಗಿ ಅಧ್ಯಯನ, ಚಿಂತನೆಗಳನ್ನು ನಡೆಸಿರುವ ಶ್ರೇಷ್ಠ ಅನುಭವಿಗಳಾಗಿದ್ದರು. ಪರಿಸರದ ಬಗ್ಗೆ ಅವರಿಗಿದ್ದ ಕಾಳಜಿ ಅಪಾರ ಮತ್ತು ಆಧ್ಯಾತ್ಮಿಕವಾಗಿ ಸಾಕಷ್ಟು ಜ್ಞಾನ ಹೊಂದಿದ್ದ ಶ್ರೀಗಳು ಜನಮಾನಸದಲ್ಲಿ ಅಜರಾಮರ.
ಈ ವೇಳೆ ವಿಧಾನ ಪರಿಷತ್ ಸದಸ್ಯರಾದ ದಿನೇಶ್ ಗೂಳಿಗೌಡ, ಆಶ್ರಮದ ಸದಸ್ಯರು ಸೇರಿದಂತೆ ಹಲವರು ಉಪಸ್ಥಿತರಿದ್ದರು.