Breaking News

ಹಿಂಸಾಚಾರಕ್ಕೆ ತಿರುಗಿದ್ದು ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿ ಚಾರ್ಜ್‌

Spread the love

ಬೆಳಗಾವಿ: ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕಲು ಮುಂದಾಗಿದ್ದ ಪಂಚಮಸಾಲಿ ಹೋರಾಟ ಹಿಂಸಾಚಾರಕ್ಕೆ ತಿರುಗಿದ್ದು ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿ ಚಾರ್ಜ್‌ ಮಾಡಿದ್ದಾರೆ.

ಇಂದು ಮಧ್ಯಾಹ್ನ ಸುವರ್ಣ ಸೌಧ ಮುತ್ತಿಗೆ ಹಾಕಲು ಬಂದ ಹೋರಾಟಗಾರರನ್ನು ಪೊಲೀಸರು ದಾರಿಯಲ್ಲೇ ತಡೆದಿದ್ದಾರೆ. ಮುತ್ತಿಗೆ ಹಾಕಲು ಅನುಮತಿ ನೀಡುವುದಿಲ್ಲ ಎಂದು ಪೊಲೀಸರು ತಿಳಿಸಿದರೂ ಪ್ರತಿಭಟನಾಕಾರರು ಪಟ್ಟುಹಿಡಿದಿದ್ದಾರೆ.ಈ ವೇಳೆ ತಳ್ಳಾಟ ನೂಕಾಟ ನಡೆದಿದೆ. ಈ ಸಂದರ್ಭದಲ್ಲಿ ಪೊಲೀಸರ ಮೇಲೆಯೇ ಚಪ್ಪಲಿ, ಕಲ್ಲು ಬಿದ್ದಿದೆ. ಮ್ಮ ಮೇಲೆಯೇ ಕಲ್ಲುತೂರಿದ್ದಕ್ಕೆ ಸಿಟ್ಟಾದ ಪೊಲೀಸರು ಪ್ರತಿಭಟನಾ ನಿರತರ ಮೇಲೆ ಲಾಠಿ ಬೀಸಿದ್ದಾರೆ. ಲಾಠಿ ಬೀಸುತ್ತಿದ್ದಂತೆ ಪ್ರತಿಭಟನಾ ನಿರತರು ದಿಕ್ಕಾಪಾಲಾಗಿ ಓಡಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ