ಬೆಳಗಾವಿ: ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿ ಮತ್ತು ಬಸನಗೌಡ ಪಾಟೀಲ್ ಯತ್ನಾಳ್ ನೇತೃತ್ವದಲ್ಲಿ ಪಂಚಮಸಾಲಿ ಸಮುದಾಯವು 2ಎ ಮೀಸಲಾತಿಗಾಗಿ ನಡೆಸುತ್ತಿರುವ ಹೋರಾಟ ಉಗ್ರರೂಪ ಪಡೆದುಕೊಂಡಿದೆ
ಮತ್ತು ಪ್ರತಿಭಟನಾಕಾರರ ಮೇಲೆ ಲಾಠಿಚಾರ್ಜ್ ನಡೆಸಿದ್ದರಿಂದ ಹಲವಾರು ಜನರಿಗೆ ರಕ್ತದ ಗಾಯಗಳಾಗಿವೆ. ಇದೇ ಹಿನ್ನೆಲೆಯಲ್ಲಿ ಪ್ರತಿಭಟನಾಕಾರರು ಹೆಚ್ಚು ಉದ್ರಿಕ್ತರಾಗಿ ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕುವ ಸಾಧ್ಯತೆ
ಇರುವುದರಿಂದ ಪೊಲೀಸ್ ಬಲ ಮತ್ತು ಭದ್ರತೆಯನ್ನು ಹೆಚ್ಚಿಸಲಾಗಿದೆ. ಪ್ರತಿಭಟನಾಕಾರರು ಇಲ್ಲಿಂದ ಕೇವಲ ಒಂದು ಕಿಮೀ ದೂರದಲ್ಲಿ ಪ್ರತಿಭಟನೆ ನಡೆಸುತ್ತಿರುವುದರಿಂದ ಅವರಿಗೆ ಇಲ್ಲಿಗೆ ನುಗ್ಗುವ ಸಾಧ್ಯತೆ ಅಲ್ಲಗಳೆಯುವಂತಿಲ್ಲ ಎಂದು ನಮ್ಮ ವರದಿಗಾರ ಹೇಳುತ್ತಾರೆ.