ಚಾಮರಾಜನಗರ: ಮಂಗಳವಾರ ಮಧ್ಯರಾತ್ರಿ ಹೃದಯಾಘಾತಕ್ಕೊಳಗಾಗಿ ನಿಧನರಾದ ಕೊಳ್ಳೇಗಾಲದ ಮಾಜಿ ಶಾಸಕ ಮತ್ತು ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ಎಸ್ ಜಯಣ್ಣ ಅವರ ಅಂತಿಮ ದರ್ಶನಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೊಳ್ಳೇಗಾಲಕ್ಕೆ ಆಗಮಿಸಿದರು.
ನಮ್ಮ ವರದಿಗಾರ ನೀಡುವ ಮಾಹಿತಿ ಪ್ರಕಾರ ಜಯಣ್ಣ ಮುಖ್ಯಮಂತ್ರಿಯವರಿಗೆ ಪರಮಾಪ್ತರಾಗಿದ್ದರು. ಮೊದಲಿಗೆ ಅವರಿಬ್ಬರೂ ಜೆಡಿಎಸ್ ನಲ್ಲಿದ್ದರು ಮತ್ತು ಜಯಣ್ಣ 2013 ರಲ್ಲಿ ಕಾಂಗ್ರೆಸ್ ಟಿಕೆಟ್ನಿಂದ ಸ್ಪರ್ಧಿಸಿ ಕೊಳ್ಳೇಗಾಲದ ಶಾಸಕರಾಗಿದ್ದರು. ಅವರ ಪಾರ್ಥೀವ ಶರೀರದ ಮುಂದೆ ಸಿದ್ದರಾಮಯ್ಯ ಭಾವುಕರಾಗಿದ್ದನ್ನು ದೃಶ್ಯಗಳಲ್ಲಿ ನೋಡಬಹುದು.