ಮುಂಬೈ: ಮಹಾರಾಷ್ಟ್ರ ವಿಧಾನ ಪರಿಷತ್ತಿನ ಆರು ಸ್ಥಾನಗಳಿಗೆ ಚುನಾವಣೆಯಲ್ಲಿ ಬಿಜೆಪಿಗೆ ಭಾರೀ ಮುಖಭಂಗವಾಗಿದ್ದು, ಕೇವಲ ಒಂದು ಸ್ಥಾನದಲ್ಲಿ ಮಾತ್ರ ಜಯಗಳಿಸಿದೆ.
ಆಡಳಿತದಲ್ಲಿರುವ ಶಿವಸೇನೆ, ಕಾಂಗ್ರೆಸ್ ಮತ್ತು ಎನ್ಸಿಪಿ ಮೈತ್ರಿ ನಾಲ್ಕು ಸ್ಥಾನಗಳನ್ನು ತನ್ನದಾಗಿಸಿಕೊಂಡಿದೆ. ಉಳಿದ ಒಂದು ಸ್ಥಾನದಲ್ಲಿ ಪಕ್ಷೇತರ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ.
ಬಿಜೆಪಿಗೆ ಅತ್ಯಂತ ಗಟ್ಟಿ ನೆಲೆ ಎಂದೆನಿಸಿಕೊಂಡಿರುವ ನಾಗ್ಪುರದಲ್ಲಿ ಬಿಜೆಪಿ ಸೋಲುಂಡಿದೆ. ಈ ಕ್ಷೇತ್ರದಲ್ಲಿ ಈ ಹಿಂದೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಮತ್ತು ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರ ತಂದೆ ಗಂಗಾಧರ್ ರಾವ್ ಫಡ್ನವೀಸ್ ಪ್ರತಿನಿಧಿಸಿದ್ದರು.
1989 ರಲ್ಲಿ ಮೊದಲ ಬಾರಿಗೆ ಕ್ಷೇತ್ರವನ್ನು ಗೆದ್ದ ಗಡ್ಕರಿ ಅವರು ನಾಲ್ಕು ಬಾರಿ ಇದೇ ಕ್ಷೇತ್ರದಿಂದ ಗೆಲುವು ಸಾಧಿಸಿದ್ದರು.ಫಡ್ನವೀಸ್ ಮತ್ತು ಮಹಾರಾಷ್ಟ್ರ ಬಿಜೆಪಿ ಮುಖ್ಯಸ್ಥ ಚಂದ್ರಕಾಂತ್ ಪಾಟೀಲ್ ಸೇರಿದಂತೆ ಬಿಜೆಪಿ ನಾಯಕರು ಪುಣೆಯಲ್ಲಿ ವ್ಯಾಪಕವಾಗಿ ಪ್ರಚಾರ ನಡೆಸಿದ್ದರು.
ನಾವು ಆಡಳಿತ ಪಕ್ಷವನ್ನು ತಪ್ಪಾಗಿ ಅರಿತಿದ್ದೆವು. ಚುನಾವಣಾ ಫಲಿತಾಂಶ ನಾವಂದುಕೊಂಡಂತೆ ಬಂದಿಲ್ಲ ಎಂದು ಬಿಜೆಪಿ ನಾಯಕ ಫಡ್ನವೀಸ್ ಹೇಳಿದ್ದಾರೆ.
Laxmi News 24×7