ಕಾರವಾರ: ಮುರುಡೇಶ್ವರದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಶಿಕ್ಷಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ
.ಕೋಲಾರದಿಂದ (Kolar) ಮುರುಡೇಶ್ವರಕ್ಕೆ ಪ್ರವಾಸ ತೆರಳಿದ್ದವರ ಪೈಕಿ ನಾಲ್ಕು ಜನ ವಿದ್ಯಾರ್ಥಿನಿಯರು ನೀರು ಪಾಲಾದ ಬಳಿಕ ಉತ್ತರ ಕನ್ನಡ (Uttara Kannada) ಜಿಲ್ಲಾಡಳಿತ ಎಚ್ಚೆತ್ತುಕೊಂಡಿದೆ.
ಒಂದೆಡೆ ಮುರುಡೇಶ್ವರ ಕಡಲ ತೀರದಲ್ಲಿ ನಿರ್ಬಂಧ ಹೇರಲಾಗಿದ್ದು, ಇನ್ನೊಂದೆಡೆ ಮುಖ್ಯ ಶಿಕ್ಷಕಿ ಸೇರಿ ಒಟ್ಟು 7 ಶಿಕ್ಷಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಶಿಕ್ಷಕರ ವಿರುದ್ದ ಪ್ರಕರಣ ದಾಖಲಿಸಲಾಗಿದ್ದು, ನಾಲ್ಕು ವಿದ್ಯಾರ್ಥಿನಿಯರ ಸಾವಿಗೆ ಕಾರಣ, ನಿರ್ಲಕ್ಷ್ಯ ಕುರಿತು ತನಿಖೆ ಕೈಗೊಂಡಿದ್ದಾರೆ.