Breaking News

ಪ್ರವಾಸದ ವೇಳೆ ಮಕ್ಕಳ ಬಗ್ಗೆ ಶಿಕ್ಷಕರಿಗೆ ಜಾಗೃತಿ ಇರಲಿ

Spread the love

ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಗಳು ಶೈಕ್ಷಣಿಕ ಪ್ರವಾಸಕ್ಕೆಂದು ಹೋದ ಸಂದರ್ಭದಲ್ಲಿ ಮುರುಡೇಶ್ವರ ಬಳಿಯ ಸಮುದ್ರದಲ್ಲಿ ನೀರುಪಾಲಾದ ಸುದ್ದಿ ತಿಳಿದು ಆಘಾತವಾಯಿತು. ಮೃತ ಮಕ್ಕಳ ಆತ್ಮಕ್ಕೆ ಶಾಂತಿ ಕೋರುತ್ತೇನೆ.

ಮಕ್ಕಳ ದುಃಖತಪ್ತ ಪೋಷಕರಿಗೆ ನನ್ನ ಸಂತಾಪಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಂಬನಿ ಮಿಡಿದಿದ್ದಾರೆ.

ಈ ದುರ್ಘಟನೆಯಲ್ಲಿ ಮಡಿದ ನಾಲ್ವರು ವಿದ್ಯಾರ್ಥಿಗಳ ಕುಟುಂಬಕ್ಕೆ ರಾಜ್ಯ ಸರ್ಕಾರದ ವತಿಯಿಂದ ತಲಾ ₹ 5 ಲಕ್ಷ ಪರಿಹಾರ ನೀಡಲಾಗುವುದು. ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಗಳ ಜೊತೆ ಮಾತನಾಡಿ ಮೃತ ದೇಹಗಳನ್ನು ಹುಟ್ಟೂರಿಗೆ ತಲುಪಿಸುವ ವ್ಯವಸ್ಥೆ ಮಾಡುವಂತೆ ಸೂಚಿಸಿದ್ದೇನೆ ಎಂದು ಸಿಎಂ ತಿಳಿಸಿದ್ದಾರೆ.

ಪ್ರವಾಸದ ಸಂದರ್ಭದಲ್ಲಿ ಶಿಕ್ಷಕರು ಮಕ್ಕಳ ಬಗ್ಗೆ ಹೆಚ್ಚು ಜಾಗೃತೆ ವಹಿಸಬೇಕು. ಅಪಾಯಕಾರಿ ಸ್ಥಳಗಳಿಗೆ ಭೇಟಿ ನೀಡುವಾಗ ಮಕ್ಕಳ ಮೇಲೆ ನಿಗಾ ಇಡಬೇಕು. ಮಕ್ಕಳನ್ನು ಕಳೆದುಕೊಂಡ ಹೆತ್ತವರ ನೋವು ಸಂಕಟವನ್ನು ನಾನು ಅರ್ಥೈಸಿಕೊಳ್ಳಬಲ್ಲೆ, ಇಂತಹ ಅವಘಡಗಳು ಮತ್ತೆಂದೂ ಸಂಭವಿಸದಿರಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.


Spread the love

About Laxminews 24x7

Check Also

ನಾಯಕತ್ವ ಬದಲಾವಣೆ ವಿಚಾರವಾಗಿ ರಾಹುಲ್​ ಗಾಂಧಿ​ ತೀರ್ಮಾನಕ್ಕೆ ನಾನು ಬದ್ಧ: ಸಿಎಂ

Spread the loveಮೈಸೂರು: “ನಾಯಕತ್ವ ಬದಲಾವಣೆ ವಿಚಾರವಾಗಿ ರಾಹುಲ್​ ಗಾಂಧಿ ಮತ್ತು ಹೈಕಮಾಂಡ್​ ತೀರ್ಮಾನ ಮಾಡಬೇಕು. ಅವರು ಏನು ತೀರ್ಮಾನ ಮಾಡುತ್ತಾರೋ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ