Breaking News

ರಾಜ್ಯಾದ್ಯಂತ ಪಂಚಮಸಾಲಿ ಸಮುದಾಯದವರ ಪ್ರತಿಭಟನೆ

Spread the love

ಪಂಚಮಸಾಲಿ ಹೋರಟಗಾರರ ಮೇಲೆ ಲಾಠಿ ಚಾರ್ಜ್ ನಡೆಸಿರುವ ಕ್ರಮ ಖಂಡಿಸಿ ರಾಜ್ಯಾದ್ಯಂತ ಪಂಚಮಸಾಲಿ ಸಮುದಾಯದವರು ಪ್ರತಿಭಟನೆ ತೀವ್ರಗೊಳಿಸಿದ್ದಾರೆ. ಅದರಲ್ಲಿಯೂ ಬೆಳಗಾವಿಯಲ್ಲಿ ಪ್ರತಿಭಟನೆ ಮತ್ತೆ ತೀವ್ರ ಸ್ವರೂಪ ಪಡೆಯುತ್ತಿದೆ.

ಬೆಳಗಾವಿಯ ಹಿರೆಬಾಗೇವಾಡಿ, ಅಥಣಿ ಸೇರಿದಂತೆ ಹಲವೆಡೆ ಹೆದ್ದಾರಿಗಳನ್ನು ತಡೆದು ಪ್ರತಿಭಟನೆ ನಡೆಸಲಾಗುತ್ತಿದೆ. ಪೊಲಿಸರು ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಥಣಿಯಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆದು, ಟೈರ್ ಗೆ ಬೆಂಕಿ ಹಚ್ಚಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸರ್ಕಾರದ ವಿರುದ್ಧವೂ ಘೋಷಣೆಗಳನ್ನು ಕೂಗಿದ್ದಾರೆ.

ಪಂಚಮಸಾಲಿ ಸಮುದಾಯದ ಹೋರಾಟಗಾರರ ಮೇಲೆ ಲಾಠಿ ಚಾರ್ಜ್ ಖಂಡಿಸಿ ಬಸವ ಜಯಮೃತ್ಯುಂಜಯ ಸ್ವಾಮೀಜಿ ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಇಂದು ಪಂಚಾಸಾಲಿ ಸಮುದಾಯದವರ ಪ್ರತಿಭಟನೆ ಮತ್ತೆ ತೀವ್ರಗೊಂಡಿದೆ.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ