ಬೆಳಗಾವಿಯಲ್ಲಿ ಪಂಚಮಸಾಲಿ ಹೋರಾಟಗಾರರ ಪ್ರತಿಭಟನೆ ಮತ್ತೆ ತೀವ್ರಗೊಂಡಿದೆ. ಡಿ.10ರಂದು ಪಂಚಮಸಾಲಿ ಸಮುದಾಯದ ಹೋರಾಟಗಾರರ ಮೇಲೆ ಪೊಲೀಸರು ನಡೆಸಿರುವ ಲಾಠಿ ಚಾರ್ಜ್ ಕ್ರಮ ಖಂಡಿಸಿ ಹಾಗೂ 2ಎ ಮೀಸಲಾತಿಗೆ ಆಗ್ರಹಿಸಿ ಪ್ರತಿಭಟನಾಕಾರರು ಇಂದು ಹಳ್ಳಿ ಹಳ್ಳಿಗಳ ಮುಖ್ಯ ರಸ್ತೆಗಳನ್ನು ತಡೆದು ಪ್ರತಿಭಟನೆ ನಡೆಸುತ್ತಿದ್ದಾರೆ.
ಈ ವೇಳೆ ಬೆಳಗಾವಿಯ ಹಿರೇಬಾಗೇವಾಡಿ ಟೋಲ್ ಬಳಿ ಪಂಚಮಸಾಲಿ ಸಮುದಾಯದವರು ನಡೆಸುತ್ತಿರುವ ಪ್ರತಿಭಟನೆ ವೇಳೆ ಸ್ಥಳದಲ್ಲಿ ಮರಕಾಸ್ತ್ರ ಪತ್ತೆಯಾಗಿದೆ. ಸ್ಕೂಟರ್ ಮೇಲೆ ಮಾರಕಾಸ್ತ್ರಗಳು ಇರುವುದು ಕಂಡು ಒಂದು ಕ್ಷಣ ಪೊಲೀಸರು ಶಾಕ್ ಆಗಿದ್ದಾರೆ.
ಸದ್ಯ ಮಾರಕಾಸ್ತ್ರಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಹೋರಾಟಗಾರರೇ ಮಾರಕಾಸ್ತ್ರಗಳನ್ನು ತಂದಿದ್ದಾರಾ? ಅಥವಾ ಬೇರೆ ಯಾರಾದರೂ ತಂದಿಟ್ಟಿದ್ದಾರಾ? ಎಂಬ ಬಗ್ಗೆ ತನಿಖೆ ನಡೆಸಲಾಗುತ್ತಿದೆ.
ಈ ನಡುವೆ ಬೆಳಗಾವಿಯ ವಿವಿಧ ಹಳ್ಳಿಗಳ ಮುಖ್ಯ ರಸ್ತೆಗಳಲ್ಲಿ ರಸ್ತೆ ತಡೆ ನಡೆಸಿ ಪಂಚಮಸಾಲಿ ಸಮುದಾದವರು ಪ್ರತಿಭಟನೆ ನಡೆಸಿದ್ದಾರೆ. ಬಸವ ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದೆ.