Breaking News

ಬಿಎಂಟಿಸಿ ಆರ್ಥಿಕ ಕುಸಿತಕ್ಕೆ ಕಾರಣ ಬಹಿರಂಗ

Spread the love

ಡಿಸೆಂಬರ್​ 13: ಪ್ರಯಾಣ ದರ ಹೆಚ್ಚಿಸದಿದ್ದಕ್ಕೆ ಮತ್ತು ಕರ್ನಾಟಕ ಸರ್ಕಾರವು (Karnataka Government) ಆರ್ಥಿಕ ನೆರವು ನೀಡದೆ ಇರುವುದರಿಂದ ಬೆಂಗಳೂರು ಮಹಾನಗರ ಸಾರಿಗೆ (BMTC)ಯ ಆರ್ಥಿಕ ಪರಿಸ್ಥಿತಿ ಸುಧಾರಿಸಿಲ್ಲ.

ಇದು ಬಿಎಂಟಿಸಿ ಆರ್ಥಿಕವಾಗಿ ಕುಸಿಯಲು ಕಾರಣವಾಗಿದೆ ಎಂದು ಭಾರತದ ಲೆಕ್ಕ ನಿಯಂತ್ರಕರು ಮತ್ತು ಮಹಾಲೆಕ್ಕ ಪರಿಶೋಧಕರ (ಸಿಎಜಿ) ವರದಿ ಬಯಲು ಮಾಡಿದೆ.ಬಿಎಂಟಿಸಿಯ ಕಾರ್ಯನಿರ್ವಹಣೆಯ ಕಾರ್ಯಕ್ಷಮತೆಯ ಸಿಎಜಿ ವರದಿ ಗುರುವಾರ ವಿಧಾನಸಭೆಯಲ್ಲಿ ಮಂಡನೆಯಾಯಿತು.

ಹಿರಿಯ ನಾಗರೀಕರು, ವಿದ್ಯಾರ್ಥಿಗಳು ಸೇರಿದಂತೆ ಇನ್ನಿತರ ಪ್ರಯಾಣಿಕರಿಗೆ ರಿಯಾಯಿತಿ ಬಸ್‌ ಪಾಸ್‌ಗೆ ರಾಜ್ಯ ಸರ್ಕಾರ ಅನುದಾನ ನೀಡುತ್ತಿರುವುದರಿಂದ ಬಿಎಂಟಿಸಿಗೆ ಆರ್ಥಿಕ ನೆರವು ನೀಡಲು ಸರ್ಕಾರಕ್ಕೆ ಸಾಧ್ಯವಾಗುತ್ತಿಲ್ಲ. ಹೀಗಾಗಿ, ಬಿಎಂಟಿಸಿ ಆರ್ಥಿಕವಾಗಿ ಕುಸಿಯಲು ಇದು ಒಂದು ಕಾರಣವಾಗಿದೆ ಎಂದು ವರದಿಯಲ್ಲಿ ಉಲ್ಲೇಖವಾಗಿದೆ.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ