ಡಿಸೆಂಬರ್ 13: ರಾಜಧಾನಿ ಬೆಂಗಳೂರಲ್ಲಿ (Bengaluru) ಆಸ್ತಿ ಮಾರಾಟ, ಖರೀದಿ ಸೇರಿದಂತೆ ಇತರೆ ಕೆಲಸಗಳಿಗೆ ಇ-ಖಾತಾ (E-Khata) ಕಡ್ಡಾಯಗೊಳಿಸಲಾಗಿದೆ.
ಇತ್ತ, ಇ-ಖಾತಾ ಪಡೆಯೋಕೆ ಪ್ರತಿ ವಾರ್ಡ್ನ ಬಿಬಿಎಂಪಿ ಕಚೇರಿಗಳಲ್ಲಿ ಅವಕಾಶ ಕಲ್ಪಿಸಿದ್ದರೂ, ಬೆಂಗಳರು ಒನ್ ಕೇಂದ್ರಗಳಲ್ಲಿ ಇ-ಖಾತಾ ಪಡೆಯಲು ಅವಕಾಶ ನೀಡಿದ್ದರೂ ಜನರಿಗೆ ಮಾತ್ರ ಸಮಸ್ಯೆ ತಪ್ಪದಂತಾಗಿದೆ.

ದಾಖಲೆಗಳು ಸರಿಯಿದ್ದರೆ ಸರ್ವರ್ ಇರಲ್ಲ, ಸರ್ವರ್ ಸರಿಯಿದ್ದರೆ ದಾಖಲೆ ಇಲ್ಲ ಎಂಬ ಸಂದಿಗ್ದ ಪರಿಸ್ಥಿತಿಗೆ ಸಿಲುಕಿರುವ ಜನರು ಇ-ಖಾತಾ ಪಡೆಯೋಕೆ ಪರದಾಡುತ್ತಿದ್ದಾರೆ.ಸದ್ಯ ಕೃಷಿಭೂಮಿಯಿಂದ ಪರಿವರ್ತನೆಯಾದ ಜಾಗಗಳು, ಬಿಡಿಎ ಸ್ವಾಧೀನ ಬಳಿಕ ಕೈಬಿಟ್ಟ ಜಾಗಗಳು, ಎ ಖಾತಾ, ಬಿ ಖಾತಾ ಪಡೆಯುವಾಗ ಮ್ಯಾನುವಲ್ ಇದ್ದಿದ್ದರಿಂದ ಕೆಲ ದಾಖಲೆಗಳು ಇಲ್ಲದಿದ್ದರೂ ಖಾತಾ ಲಭ್ಯವಾಗಿದೆ. ಆದರೆ, ಇದೀಗ ಇ-ಖಾತಾ ಮಾಡಿಸಲು ಕೆಲ ದಾಖಲೆಗಳು ಸೂಕ್ತ ರೀತಿಯಲ್ಲಿ ಒದಗಿಸಲು ಆಗದಿರುವುದರಿಂದ ಜನರಿಗೆ ಸಂಕಷ್ಟವಾಗಿದೆ.
ಕಟ್ಟಡ ಮಂಜೂರು ನಕ್ಷೆ, ಕೂಡ ಹಲವು ಮಾಲೀಕರ ಬಳಿ ಇಲ್ಲದಿರುವುದು ಕೂಡ ಸಮಸ್ಯೆಗೆ ಕಾರಣವಾಗಿದೆ. ಇ-ಖಾತಾ ಪಡೆಯಲು ಇನ್ನೂ ಪರದಾಡವ ಸ್ಥಿತಿ ನಿರ್ಮಾಣವಾಗಿದೆ. ಇ-ಖಾತಾ ಪಡೆಯಲು ಹೋದರೆ ಅಧಿಕಾರಿಗಳು ನಿರ್ಲಕ್ಷ್ಯ ತೋರುತ್ತಿದ್ದಾರೆ ಎಂಬ ಆರೋಪ ಕೂಡ ಕೇಳಿಬರುತ್ತಿದ್ದು, ಇ-ಖಾತಾ ಸಮಸ್ಯೆಗಳನ್ನು ಬಗೆಹರಿಸದ ಪಾಲಿಕೆ ವಿರುದ್ಧ ಜನರು ಕಿಡಿಕಾರುತ್ತಿದ್ದಾರೆ.
Laxmi News 24×7