Breaking News

ನಮ್ಮ ವರ್ತನೆಯಿಂದ, ತಪ್ಪಿನಿಂದ, ಭಾಷೆಯಿಂದ, ಏಕಪಕ್ಷೀಯ ನಿರ್ಧಾರದಿಂದ ಪಕ್ಷಕ್ಕೆ ಸೋಲಾಗುತ್ತಿದೆ:ಸತೀಶ್ ಜಾರಕಿಹೊಳಿ

Spread the love

ಬೆಳಗಾವಿ: ನಮ್ಮ ವರ್ತನೆಯಿಂದ, ತಪ್ಪಿನಿಂದ, ಭಾಷೆಯಿಂದ, ಏಕಪಕ್ಷೀಯ ನಿರ್ಧಾರದಿಂದ ಪಕ್ಷಕ್ಕೆ ಸೋಲಾಗುತ್ತಿದೆ. ಕೆಲ ಬದಲಾವಣೆ ತರುವ ಬಗ್ಗೆ ಸಭೆಯಲ್ಲಿ ನಾಯಕರು ಸಲಹೆ ನೀಡಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಮತ್ತೆ ಪುನರ್ ಕಟ್ಟುವ ಬಗ್ಗೆ ವ್ಯಾಪಕ ಚರ್ಚೆ ನಡೆದಿದೆ. ಪಕ್ಷದಲ್ಲಿ ಭವಿಷ್ಯದಲ್ಲಿ ಬದಲಾವಣೆ ಮಾಡಿದರೆ ಮಾತ್ರ ಪಕ್ಷಕ್ಕೆ ಒಳ್ಳೆಯದು ಎನ್ನುವ ಅಭಿಪ್ರಾಯ ವ್ಯಕ್ತವಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದರು.

ಬೆಳಗಾವಿ-ಬೆಂಗಳೂರಿನ ಆತ್ಮಾವಲೋಕನ ಸಭೆಗೆ ಸಂಬಂಧಿಸಿದಂತೆ ನಗರದಲ್ಲಿ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸದ ಅವರು, ಸಾಮೂಹಿಕ ನಾಯಕತ್ವದಲ್ಲಿ ಪಕ್ಷ ಮುನ್ನಡೆಸಲು ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಲ್ಲ ನಾಯಕರು ಹೃದಯಪೂರ್ವಕ ಹಾಗೂ ಮುಕ್ತವಾಗಿ ಚರ್ಚೆ ಮಾಡಿದ್ದಾರೆ.
ನಿಗಮಗಳ ಸ್ಥಾಪನೆ, ಮೀಸಲಾತಿ ಬಗ್ಗೆ ಕಾಂಗ್ರೆಸ್ ಪಕ್ಷದ ನಿಲುವೇನು? ಎಂಬುದರ ಬಗ್ಗೆ ಚರ್ಚೆ ನಡೆದಿದೆ ಎಂದು ಹೇಳಿದರು.

ಸೂಕ್ತ ಬದಲಾವಣೆ ತರುವ ಬಗ್ಗೆ ಕೆಪಿಸಿಸಿ ಅಧ್ಯಕ್ಷರು ಒಪ್ಪಿಕೊಂಡಿದ್ದಾರೆ. ಒಬ್ಬ ನಾಯಕನಿಗೆ ಬೈಯುವುದರಿಂದ ಅವರ ಸಮುದಾಯಕ್ಕೆ ನೋವಾಗುತ್ತದೆ ಎನ್ನುವ ಸೂಕ್ಷ್ಮ ವಿಚಾರಗಳ ಕುರಿತು ಚರ್ಚೆ ನಡೆದಿದೆ ಎಂದರು.


Spread the love

About Laxminews 24x7

Check Also

ವೋಟ್‌ಚೋರಿಗೆ SIR ದುರ್ಬಳಕೆ..? – ಬೆಂಗಳೂರಿನ ಜನರಿಗೂ ಸಿಎಂ ಡಿಕೆಶಿ ಎಚ್ಚರಿಕೆ

Spread the loveಬೆಂಗಳೂರು: ರಾಜ್ಯದಲ್ಲಿ ಎಸ್‌ಐಆರ್ ಫಾರಂ-7 ವಿವಾದ ಮತ್ತೊಂದು ಮಜಲಿಗೆ ತಲುಪಿದೆ. ಬೆಂಗಳೂರಿನಲ್ಲೂ ಎಸ್‌ಐಆರ್ ಸಂಬಂಧ ಇಬ್ಬರ ವಿರುದ್ಧ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ