Breaking News

ಅಕ್ಕ ಪಕ್ಕದ ಮನೆಗಳಿಂದ ಕದ್ದ ಹತ್ತಾರು ಶೂಗಳನ್ನು ಮಾರುತ್ತಿದ್ದ ದಂಪತಿ,

Spread the love

ಹೈದರಾಬಾದ್​: ಅಕ್ಕ ಪಕ್ಕದ ಮನೆಗಳಿಂದ ಕದ್ದ ಹತ್ತಾರು ಶೂಗಳನ್ನು ಬಿಚ್ಚುತ್ತಿದ್ದಾಗ ಜೋಡಿಯೊಂದು ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿರುವ ಘಟನೆ ಹೈದರಾಬಾದ್​ನಲ್ಲಿ ನಡೆದಿದೆ.

ಈ ದಂಪತಿ ಸಮೀಪದ ಮನೆ ಹಾಗೂ ದೇವಾಲಯಗಳಿಂದ ಶೂ ಕದ್ದು ಸ್ಥಳೀಯ ಮಾರುಕಟ್ಟೆಗಳಲ್ಲಿ ಬೀದಿ ವ್ಯಾಪಾರಿಗಳಿಗೆ ಮಾರಾಟ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಸದ್ಯ ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್​ ಆಗಿದೆ.

ಮನೆಯಲ್ಲಿ ಶೂ ಕಳವಾಗುತ್ತಿದ್ದಂತೆ ಸ್ಥಳೀಯರು ಅನುಮಾನಗೊಂಡು ದಂಪತಿಯ ಮನೆಯಲ್ಲಿ ಶೋಧ ನಡೆಸಿದಾಗ ಅನೇಕ ಶೂಗಳು ಪತ್ತೆಯಾಗಿವೆ. ಕದ್ದ ಶೂಗಳನ್ನು ಸ್ಥಳೀಯ ಮಾರುಕಟ್ಟೆಗೆ ಮಾರಾಟ ಮಾಡುತ್ತಿರುವುದು ಬೆಳಕಿಗೆ ಬಂದಿದೆ.


Spread the love

About Laxminews 24x7

Check Also

ಔತಣ ಕೂಟದಲ್ಲಿ ಪಾಲ್ಗೊಂಡು, ಡಿಕೆಶಿಗೆ ಅಭಿನಂದಿಸಿದ ಹೆಬ್ಬಾಳಕರ್, ಹಟ್ಟಿಹೊಳಿ

Spread the loveಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಖಾಸಗಿ ಹೊಟೇಲ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ