Breaking News

ಮಾನ್ಯ ವೈದ್ಯಕೀಯ ಶಿಕ್ಷಣ ಸಚಿವರಾದ ಶ್ರೀ ಶರಣ ಪ್ರಕಾಶ್ ಪಾಟೀಲ ಅವರ ಉಪಸ್ಥಿತಿಯಲ್ಲಿ ಬೆಳಗಾವಿಯ ಜಿಲ್ಲಾ ಆಸ್ಪತ್ರೆಯಲ್ಲಿ (ಬಿಮ್ಸ) ಎಲ್ಲ ವಿಭಾಗಗಳ ಮುಖ್ಯಸ್ಥರ ಸಭೆ

Spread the love

ಮಾನ್ಯ ವೈದ್ಯಕೀಯ ಶಿಕ್ಷಣ ಸಚಿವರಾದ ಶ್ರೀ ಶರಣ ಪ್ರಕಾಶ್ ಪಾಟೀಲ ಅವರ ಉಪಸ್ಥಿತಿಯಲ್ಲಿ ಬೆಳಗಾವಿಯ ಜಿಲ್ಲಾ ಆಸ್ಪತ್ರೆಯಲ್ಲಿ (ಬಿಮ್ಸ) ಎಲ್ಲ ವಿಭಾಗಗಳ ಮುಖ್ಯಸ್ಥರ ಸಭೆ ನಡೆಸಿ, ಆಸ್ಪತ್ರೆಯ ಕುಂದು‌ಕೊರತೆಗಳನ್ನು ಆಲಿಸಲಾಯಿತು. ಬಾಣಂತಿಯರು ಹಾಗೂ ಹಸುಗೂಸುಗಳ ಬಗ್ಗೆ ಹೆಚ್ಚಿನ ನಿಗಾವಹಿಸಿ, ಬಿಮ್ಸ್ ಗೆ ಉತ್ತಮ ಹೆಸರು ತರಲು ಎಲ್ಲರೂ ಪ್ರಯತ್ನಿಸಬೇಕೆಂದು ಸೂಚನೆ ನೀಡಲಾಯಿತು. ಇದೇ ವೇಳೆ ಯಾವುದೇ ಸಮಸ್ಯೆಗಳು ಕಂಡು ಬಂದರೆ ಕೂಡಲೇ ಸರ್ಕಾರದ ಗಮನಕ್ಕೆ ತರಬೇಕು ಎಂದು‌ ಸಚಿವ ಶರಣ ಪ್ರಕಾಶ್ ಪಾಟೀಲ್ ಹೇಳಿದರು.

ಬೆಳಗಾವಿ ಉತ್ತರ ಕ್ಷೇತ್ರದ ಶಾಸಕರಾದ ರಾಜು ಸೇಠ್, ವೈದ್ಯಕೀಯ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಾದ ಮೊಹಮ್ಮದ್ ಮೊಸೀನ್, ಬಿಮ್ಸ್ ನಿರ್ದೇಶಕರಾದ ಅಶೋಕ್ ಶೆಟ್ಟಿ, ಅಧೀಕ್ಷಕರಾದ ಡಾ.ವೀರಣ್ಣ ಪಲ್ಲೆದ್, ಮುಖ್ಯ ಆಡಳಿತಾಧಿಕಾರಿ ಸಿದ್ದು ಹುಲ್ಲಳ್ಳಿ, ಜಿಲ್ಲಾ ಸರ್ಜನ್ ಡಾ.ವಿಠಲ್ ಶಿಂಧೆ, ಶಿಲ್ಪಾ ವಾಲಿ, ಡಾ.ಸರೋಜ ತಗಡಿ, ಡಾ.ಉಮೇಶ್ ಕುಲಕರ್ಣಿ ‌ಸೇರಿದಂತೆ ಹಲವರು ಉಪಸ್ಥಿತರಿದ್ದರು.

#Belagavi


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ