Breaking News

ಬಳ್ಳಾರಿ ಬಾಣಂತಿಯರ ಸಾವಿಗೆ ಔಷಧ ಮಾತ್ರ ಕಾರಣವಲ್ಲ: ರಾಜ್ಯ ಮಹಿಳಾ ಆಯೋಗ

Spread the love

ಬಳ್ಳಾರಿ, ಡಿಸೆಂಬರ್​ 14: ಬಳ್ಳಾರಿ ಜಿಲ್ಲಾ ಆಸ್ಪತ್ರೆಯಲ್ಲಿ (BIMS) ಬಾಣಂತಿಯರ ಸಾವಿಗೆ ಕೇವಲ IV ರಿಂಗರ್ ಲ್ಯಾಕ್ಟೇಟ್ ದ್ರಾವಣ ಮಾತ್ರ ಕಾರಣವಲ್ಲ ಶಸ್ತ್ರಚಿಕಿತ್ಸಾ ಕೊಠಡಿಯಲ್ಲಿನ ಅಸ್ವಚ್ಛತೆ ಕೂಡ ಕಾರಣವಾಗಿರಬಹುದು ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ (Nagalakshmi Chowdhary) ಅನುಮಾನ ವ್ಯಕ್ತಪಡಿಸಿದ್ದಾರೆ.

ಕರ್ನಾಟಕ ರಾಜ್ಯ ಮಹಿಳಾ ಆಯೋದ ಅಧ್ಯಕ್ಷ ಡಾ. ನಾಗಲಕ್ಷ್ಮೀ ಚೌದರಿ ಅವರು ಶುಕ್ರವಾರ (ಡಿ.13) ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದರು. ಆಸ್ಪತ್ರೆಯಲ್ಲಿನ ಹೆರಿಗೆ ವಾರ್ಡ್​​, ಶಸ್ತ್ರಚಿಕಿತ್ಸಾ ಕೊಠಡಿ, ಆಸ್ಪತ್ರೆಗೆ ಸರಬರಾಜು ಆಗುವ ನೀರಿನ ಟ್ಯಾಂಕ್‌ಗಳನ್ನು ಪರಿಶೀಲನೆ ನಡೆಸಿದರು.

ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬಾಣಂತಿಯರ ಸಾವಿಗೆ IV ರಿಂಗರ್ ಲ್ಯಾಕ್ಟೇಟ್ ದ್ರಾವಣ ಮಾತ್ರ ಕಾರಣವಲ್ಲ. ಹೆರಿಗೆಯಾದ ಶಸ್ತ್ರಚಿಕಿತ್ಸಾ ಕೊಠಡಿ ಕೂಡ ಕಾರಣವಾಗಿರಬಹುದು ಎಂದು ಅನುಮಾನ ವ್ಯಕ್ತಪಡಿಸಿದರು.

ಶಸ್ತ್ರಚಿಕಿತ್ಸಾ ಕೊಠಡಿಯಲ್ಲಿ ಶಸ್ತ್ರಚಿಕಿತ್ಸೆಯಾದ ಬಳಿಕ ನಂಜು, ಬ್ಯಾಕ್ಟೀರಿಯಾದಿಂದ ಇನ್ಫೆಕ್ಷನ್ ಆಗುವ ಸಾಧ್ಯತೆ ಇರುತ್ತೆ. ಹೀಗಾಗಿ, ಶಸ್ತ್ರಚಿಕಿತ್ಸಾ ಕೊಠಡಿಯ ಗಾಳಿ, ಗೋಡೆ, ಟೇಬಲ್ ಇಡೀ ಹರಿಗೆ ಸ್ವ್ಯಾಬ್ ಸ್ಯಾಂಪಲ್ ವರದಿ ಬೇಕಿದೆ. ಶಸ್ತ್ರಚಿಕಿತ್ಸಾ ಕೊಠಡಿಯಿಂದಲೂ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆ ಇದೆ. ಸ್ವಚ್ಛತೆ ಇಲ್ಲದಿದ್ದರೆ ಇನ್ಫೆಕ್ಷನ್ ಆಗಿ ಬಾಣಂತಿಯರು ಸಾವನ್ನಪ್ಪುವ ಸಾಧ್ಯತೆ ಇರುತ್ತದೆ. ಹೀಗಾಗಿ, ಅದರ ವರದಿ ಬೇಕು ಅಂತ ಸೂಚನೆ ನೀಡಿದ್ದೇನೆ ಎಂದು ತಿಳಿಸಿದರು.


Spread the love

About Laxminews 24x7

Check Also

ಕಾಮದ ಮುಂದೆ ಈ ಕಾಲದಲ್ಲಿ ಸಂಬಂಧಕ್ಕೆ ಬೆಲೆನೆ ಇಲ್ಲವಾಗಿದೆ..ಅಣ್ಣ-ತಂಗಿ ಲವ್ವಿಡವ್ವಿ.. ಸಾ*ವಿನಲ್ಲಿ ಅಂತ್ಯ

Spread the love ಅಣ್ಣ-ತಂಗಿ ಲವ್ವಿಡವ್ವಿ.. ಸಾ*ವಿನಲ್ಲಿ ಅಂತ್ಯ ಕಾಮದ ಮುಂದೆ ಈ ಕಾಲದಲ್ಲಿ ಸಂಬಂಧಕ್ಕೆ ಬೆಲೆನೆ ಇಲ್ಲವಾಗಿದೆ.. ಇಲ್ಲೊಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ