ತೆಲಂಗಾಣದ ಜಗ್ತಿಯಾಲ ಸರ್ಕಾರಿ ಆಸ್ಪತ್ರೆಯಲ್ಲಿ ನರ್ಸ್ಗಳ ನೃತ್ಯಕ್ಕೆ ಭಾರೀ ಆಕ್ರೋಶ ವ್ಯಕ್ತವಾಗಿದೆ. ಕರ್ತವ್ಯ ನಿರತ ನರ್ಸ್ಗಳು ಮತ್ತು ವೈದ್ಯಕೀಯ ಸಿಬ್ಬಂದಿ ಸಂಭ್ರಮಾಚರಣೆ ಹೆಸರಿನಲ್ಲಿ ಗಲಾಟೆ ಸೃಷ್ಟಿಸಿದರು. ಜೋರಾಗಿ ಹಾಡು ಹಾಕಿಕೊಂಡ ಅವರು ಆಸ್ಪತ್ರೆಯಲ್ಲಿ ರೋಗಿಗಳಿದ್ದಾರೆ ಎನ್ನುವುದನ್ನೂ ಮರೆತು ಕುಣಿದು ಕುಪ್ಪಳಿಸಿದರು.
ಇದಕ್ಕೆ ರೋಗಿಗಳ ಸಂಬಂಧಿಕರು ಅಸಮಾಧಾನ ವ್ಯಕ್ತಪಡಿಸಿದ್ದರು. ಆ ರೀಲ್ಸ್ ಅನ್ನು ಅಪ್ಲೋಡ್ ಮಾಡಿದ ನಂತರ ಭಾರೀ ವಿರೋಧ ವ್ಯಕ್ತವಾಗಿದೆ. ರೋಗಿಗಳ ಆರೋಗ್ಯವನ್ನೂ ಲೆಕ್ಕಿಸದೆ ಮೋಜು-ಮಸ್ತಿ ಮಾಡುತ್ತಿರುವ ನರ್ಸ್ಗಳ ಬಗ್ಗೆ ಟೀಕೆ ವ್ಯಕ್ತವಾಗಿದೆ.
Laxmi News 24×7