Breaking News

ಗೃಹಲಕ್ಷ್ಮಿ ಹಣದಿಂದ ಬೋರ್​ವೆಲ್ ಕೊರೆಸಿದ ಅತ್ತೆ, ಸೊಸೆ!

Spread the love

ಗದಗ,  ಕರ್ನಾಟಕ ಸರ್ಕಾರ ಗೃಹಲಕ್ಷ್ಮಿ ಯೋಜನೆಯಡಿ ಪ್ರತಿ ತಿಂಗಳು ನೀಡುತ್ತಿರುವ 2000 ರೂ. ಹಣವನ್ನು ಕೂಡಿಟ್ಟು ಗದಗ ಜಿಲ್ಲೆ ಗಜೇಂದ್ರಗಡ ಪಟ್ಟಣದ ಮಾಲಧಾರ ಓಣಿಯ ಅತ್ತೆ ಹಾಗೂ ಸೊಸೆ ಕೊಳವೆ ಬಾವಿ ಕೊರೆಸಿದ್ದಾರೆ. ಬೋರ್​ವೆಲ್​ನಲ್ಲಿ ಅವರಿಗೆ ನೀರು ಕೂಡ ದೊರೆತಿದೆ. ಇದೀಗ ಈ ಬಗ್ಗೆ ಅತ್ತೆ ಮಾಬುಬೀ ಹಾಗೂ ಸೊಸೆ ರೋಷನ್ ಬೇಗಂ ಹರ್ಷ ವ್ಯಕ್ತಪಡಿಸಿದ್ದಾರೆ.

ಅತ್ತೆ ಹಾಗೂ ಸೊಸೆ ಸೇರಿ ಗೃಹಲಕ್ಷ್ಮಿ ಯೋಜನೆಯಿಂದ ದೊರೆತ 44 ಸಾವಿರ ರೂ. ಕೊಳವೆ ಬಾವಿ ಕೊರೆಸಲು ನೀಡಿದ್ದಾರೆ. ಒಟ್ಟು 60 ಸಾವಿರ ರೂಪಾಯಿ ಖರ್ಚು ಆಗಿದೆ. ಅದರ ಗೃಹಲಕ್ಷ್ಮಿ ಯೋಜನೆಯ 44 ಸಾವಿರ ರೂ. ಬಳಕೆ ಮಾಡಿದ್ದಾರೆ. ಇನ್ನುಳಿದ್ದ ಹಣ ಮಗ ನೀಡಿದ್ದಾನೆ ಎಂದು ಮಾಬುಬೀ ತಿಳಿಸಿದ್ದಾರೆ.

ಸಿದ್ದರಾಮಯ್ಯ ಅವರು ನೀಡಿದ ಗೃಹಲಕ್ಷ್ಮಿ ಯೋಜನೆಯಿಂದ ತುಂಬಾ ಅನುಕೂಲವಾಗಿದೆ. ಸಿಎಂ ಸಿದ್ದರಾಮಯ್ಯ ಅವರಿಗೆ ನಾವು ಕೃತಜ್ಞತೆ ಸಲ್ಲಿಸುತ್ತೇವೆ ಎಂದು ಮಾಬುಬೀ ಹೇಳಿದ್ದಾರೆ.


Spread the love

About Laxminews 24x7

Check Also

ಮಾ.3ಕ್ಕೆ ರಕ್ತಚಂದ್ರಗ್ರಹಣ – ಕರ್ನಾಟಕದಲ್ಲಿ 25 ನಿಮಿಷ ಗ್ರಹಣ ಗೋಚರ

Spread the loveಬೆಂಗಳೂರು: ಮಾ.3ರಂದು ಕೇತುಗ್ರಸ್ತ ರಕ್ತಚಂದ್ರಗಹಣ  ಸಂಭವಿಸಲಿದೆ. ಹೋಳಿ ಹಬ್ಬದಂದೇ ಬಾನಂಗಳದಲ್ಲಿ ಕೆಂಬಣ್ಣದ ಚಂದಿರನ ವಿಸ್ಮಯ ಗೋಚರವಾಗಲಿದೆ. ಪಾಲ್ಗುಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ