ಹುಬ್ಬಳ್ಳಿ: ಕಾಂಗ್ರೆಸ್ ಶಾಸಕ ಮತ್ತು ಕೊಳೆಗೇರಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಪ್ರಸಾದ್ ಅಬ್ಬಯ್ಯ ಇಂದು ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡುವಾಗ,
ಪಂಚಮಸಾಲಿ ಮೀಸಲಾತಿ ಹೋರಾಟಕ್ಕೆ ಕಾನೂನಿನಲ್ಲಿ ಅವಕಾಶವಿಲ್ಲವೆಂದು ಅಚ್ಚರಿಯ ಮಾತನ್ನಾಡಿದರು. ಮೀಸಲಾತಿ ಕೇಳುವುದು ಕಾನೂನುಬಾಹಿರ ಯಾಕೆಂದರೆ ಹಿಂದೆ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ, ಅದರ ಪ್ರತಿನಿಧಿಗಳೇ ಸುಪ್ರೀಮ್ ಕೋರ್ಟ್ ಗೆ ಅಫಿಡವಿಟ್ ಒಂದನ್ನು ಸಲ್ಲಿಸಿ ಪಂಚಮಸಾಲಿಗಳಿಗೆ ಮೀಸಲಾತಿ ನೀಡಲು ಅವಕಾಶವಿಲ್ಲ ಎಂದು ಹೇಳಿದ್ದರು,
ಈಗ ಸುಮ್ಮನೆ ತೋರಿಕೆಗೆ ಪ್ರತಿಭಟನೆ ಮಾಡುತ್ತಿದ್ದಾರೆ ಎಂದು ಅವರು ಹೇಳಿದರು.