Breaking News

ನಾಯಿಯನ್ನೂ ಬಿಡದ ಕಾಮುಕರು: ಅಸಭ್ಯ ವರ್ತನೆ

Spread the love

ರಾಮನಗರ, ಡಿಸೆಂಬರ್​ 14: ರಾಜ್ಯದಲ್ಲಿ ಮಹಿಳೆಯರ ಮೇಲೆ ಅತ್ಯಾಚಾರ, ಅಸಭ್ಯ ವರ್ತನೆ, ಕಿರುಕುಳದಂತಹ ಪ್ರಕರಣಗಳು ವರದಿಯಾಗುತ್ತಲೇ ಇರುತ್ತವೆ. ಈ ಮಧ್ಯೆ ಕೆಲ ಕಾಮುಕರು ಪ್ರಾಣಿಗಳನ್ನು (animals) ಬಳಸಿಕೊಂಡು ಅನೈಸರ್ಗಿಕ ಲೈಂಗಿಕ‌ಕ್ರಿಯೆಯಲ್ಲಿ ತೊಡಗುತ್ತಿದ್ದಾರೆ. ಚಿಕ್ಕಮಗಳೂರಿನಲ್ಲಿ ಇತ್ತೀಚೆಗೆ ಇಂತಹದೊಂದು ಘಟನೆ ನಡೆದ ಬೆನ್ನಲ್ಲೇ ಇದೀಗ ರಾಮನಗರದಲ್ಲೂ ನಡೆದಿದೆ

ಸ್ಥಳೀಯರಿಂದ ಧರ್ಮದೇಟು

ನಾಯಿಯೊಂದಿಗೆ ಅನೈಸರ್ಗಿಕ ಲೈಂಗಿಕ‌ಕ್ರಿಯೆ ಮಾಡುತ್ತಿದ್ದ ವ್ಯಕ್ತಿಗೆ ಸ್ಥಳೀಯರು ಧರ್ಮದೇಟು ನೀಡಿರುವಂತಹ ಘಟನೆ ಜಿಲ್ಲೆಯ ಚನ್ನಪಟ್ಟಣ ಸಾತನೂರು ರಸ್ತೆ ಬಳಿ ನಡೆದಿದೆ. ಬಳ್ಳಾರಿ ಮೂಲದ ಬಸವ ಎಂಬ ವ್ಯಕ್ತಿಯಿಂದ ವಿಕೃತಿ ಮೆರೆಯಲಾಗಿದೆ. ಸದ್ಯ ಬಸವನನ್ನು ಚನ್ನಪಟ್ಟಣ ಗ್ರಾಮಾಂತರ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ನಿರ್ಜನ ಪ್ರದೇಶದಲ್ಲಿ ನಾಯಿ ಕಟ್ಟಿ ಹಾಕಿದ್ದ ಬಸವ, ಬಳಿಕ ಅದರ ಜೊತೆ ಅನೈಸರ್ಗಿಕ ಲೈಂಗಿಕ‌ಕ್ರಿಯೆ ಮಾಡುತ್ತಿದ್ದ. ಇದನ್ನು ಸ್ಥಳೀಯರು ಗಮನಿಸಿದ್ದಾರೆ. ನಾಯಿಯೊಂದಿಗೆ ಸಂಭೋಗ ಮಾಡುವಾಗಲೇ ಸಿಕ್ಕಬಿದ್ದ ಬಸವನಿಗೆ ಸ್ಥಳೀಯರು ಥಳಿಸಿದ್ದಾರೆ.

ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಪೊಲೀಸರು ಸ್ಥಳಕ್ಕೆ ಬಂದಿದ್ದಾರೆ. ಚನ್ನಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಬಸವನನ್ನು ವಿಚಾರಣೆ ಮಾಡಲಾಗಿದ್ದು, ಪ್ರಕರಣ ಸಂಬಂಧಿಸಿದಂತೆ ಯಾವುದೇ ದೂರು ದಾಖಲಾಗಿಲ್ಲ.


Spread the love

About Laxminews 24x7

Check Also

ಬೆಳಗಾವಿ ಮಹಾನಗರ ಪಾಲಿಕೆಯ ಇಬ್ಬರು ಬಿಜೆಪಿ ಸದಸ್ಯರ ಸದಸ್ಯತ್ವ ರದ್ದುಗೊಳಿಸಿ ಬೆಳಗಾವಿ ಪ್ರಾದೇಶಿಕ ಆಯುಕ್ತರ ಆದೇಶ

Spread the loveಬೆಳಗಾವಿ: ಮಹಾನಗರ ಪಾಲಿಕೆಯ ತಿನಿಸು ಕಟ್ಟೆ ಮಳಿಗೆಗಳನ್ನು ತಮ್ಮ ಪತ್ನಿಯರ ಹೆಸರಿನಲ್ಲಿ ಪಡೆದ ಪ್ರಕರಣದಡಿ ಪಾಲಿಕೆಯ ಇಬ್ಬರು ಬಿಜೆಪಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ