Breaking News

ನಕ್ಸಲ್​ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ ಪೇಜಾವರ ಶ್ರೀ

Spread the love

ಪಶ್ಚಿಮ ಘಟ್ಟಗಳ ಸಾಲಿನಲ್ಲಿ ನಕ್ಸಲ್ ಚಟುವಟಿಕೆ ಹೆಚ್ಚುತ್ತಿರುವ ಬೆನ್ನಲ್ಲೇ ಪೇಜಾವರ ಶ್ರೀಗಳು ನಕ್ಸಲ್ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ್ದಾರೆ. ಶನಿವಾರ ಪೇಜಾವರ ಶ್ರೀಗಳು ಚಿಕ್ಕಮಗಳೂರಿನ ಮುಂಡಗಾರಿಗೆ ಭೇಟಿ ನೀಡಿದಾಗ ಅಲ್ಲಿನ ಗ್ರಾಮಸ್ಥರು ಭಕ್ತಿ ಆದರದಿಂದ ಬರಮಾಡಿಕೊಂಡರು. ಮೈಲುದೂರ ನೂರಾರು ಮಹಿಳೆಯರು, ಪುರುಷರು ರಾಮಮಂತ್ರ ಘೋಷ ಭಜನೆಗಳೊಂದಿಗೆ ಪೂರ್ಣ ಕುಂಭಗಳ ಸಹಿತ ಶ್ರೀಗಳವರನ್ನು ಕಾಲ್ನಡಿಗೆಯಲ್ಲಿ ವನಮೆರವಣಿಗೆ ನಡೆಸಿ ಬರಮಾಡಿಕೊಂಡರು.

ಗಿರಿಜನ ಜಾಗೃತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ ವಿಶ್ವಪ್ರಸನ್ನ ಶ್ರೀಗಳು, ಗಿರಿಜನರ ಸಮಸ್ಯೆಗಳ ಕುರಿತು ಚರ್ಚೆ ನಡೆಸಿದರು. ಈ ಗ್ರಾಮವು ಮೂಲಸೌಕರ್ಯಗಳಿಂದ ವಂಚಿತವಾಗಿದೆ.

ಮುಂದಿನ ದಿನಗಳಲ್ಲೂ ಶ್ರೀಮಠ ಗಿರಿಜನ ಬಂಧುಗಳ ನೆಮ್ಮದಿಯ ಬದುಕಿಗೆ ಸದಾ ಸ್ಪಂದಿಸಲಿದೆ. ಮಕ್ಕಳಿಗೆ ಸಾಧ್ಯವಾದಷ್ಟು ಉತ್ತಮ ಶಿಕ್ಷಣ, ಸಂಸ್ಕಾರಗಳನ್ನು ನೀಡಿ ಬೆಳೆಸುವಂತೆಯೂ ಶ್ರೀಗಳು ಕಿವಿಮಾತು ಹೇಳಿ ಎಲ್ಲರಿಗೂ ಫಲಮಂತ್ರಾಕ್ಷತೆ ನೀಡಿ ಆಶೀರ್ವದಿಸಿದರು.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ