Breaking News

ಪತ್ರಿಕಾ ವಿತರಕರ ವಯಸ್ಸಿನ ಮಿತಿ 70 ವರ್ಷಕ್ಕೆ ಹೆಚ್ಚಳ

Spread the love

ಡಿಸೆಂಬರ್​ 14: ಪತ್ರಿಕಾ ವಿತರಕರಿಗಾಗಿ ರೂಪಿಸಲಾಗಿರುವ ಯೋಜನೆಯ ವಯಸ್ಸಿನ ಮಿತಿಯನ್ನು ಹೆಚ್ಚಳ ಮಾಡಿದ್ದಕ್ಕಾಗಿ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ (kv prabhakar) ಅವರನ್ನು ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಮತ್ತು ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟದ ಅಧ್ಯಕ್ಷ ಕೆ.ಶಂಭುಲಿಂಗ ಅವರು ಅಭಿನಂದಿಸಿದರು.

ಅಸಂಘಟಿತ ವಲಯದಲ್ಲಿರುವ ಪತ್ರಿಕಾ ವಿತರಕ ಕಾರ್ಮಿಕರಿಗಾಗಿ ಕಾರ್ಮಿಕ ಇಲಾಖೆಯು ರೂಪಿಸಿರುವ ಯೋಜನೆಯ ವಯಸ್ಸಿನ ಮಿತಿಯನ್ನು ಈ ಮೊದಲು 16 ವರ್ಷದಿಂದ 60 ವರ್ಷಕ್ಕೆ ಮಾತ್ರ ಸೀಮಿತ ಮಾಡಲಾಗಿತ್ತು. ಇದರಿಂದ ಸಾವಿರಾರು ಪತ್ರಿಕಾ ವಿತರಕರು ಯೋಜನೆ ಪ್ರಯೋಜನೆ ಪಡೆಯಲಾಗದೆ ಸಮಸ್ಯೆಯಲ್ಲಿರುವುದನ್ನು ಗಮನಕ್ಕೆ ತಂದು ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿತ್ತು.

ಪತ್ರಿಕಾ ವಿತರಕರ ವಯಸ್ಸಿನ ಮಿತಿ 70 ವರ್ಷಕ್ಕೆ ಹೆಚ್ಚಳ: ಸಿಎಂ ಮಾಧ್ಯಮ ಸಲಹೆಗಾರ ಪ್ರಭಾಕರ್‌ಗೆ ಅಭಿನಂದನೆ

ಅಪಘಾತ ಪರಿಹಾರ ಮತ್ತು ವೈದ್ಯಕೀಯ ಸೌಲಭ್ಯ ಯೋಜನೆಯ ವಯಸ್ಸಿನ ಮಿತಿಯನ್ನು 70 ವರ್ಷಕ್ಕೆ ವಿಸ್ತರಿಸಿ ಸರ್ಕಾರ ಆದೇಶ ಹೊರಡಿಸಿದ್ದು ಸ್ವಾಗತಾರ್ಹವಾಗಿದ್ದು, ಅದಕ್ಕಾಗಿ ಅಭಿನಂದನೆ ಸಲ್ಲಿಸುವುದಾಗಿ ಅವರು ತಿಳಿಸಿದರು.

ಅಭಿನಂದನೆ ಸ್ವೀಕರಿಸಿ ಮಾತನಾಡಿದ ಕೆ.ವಿ.ಪ್ರಭಾಕರ್ ಅವರು, ಪತ್ರಿಕಾ ವಿತರಕರ ಬಗ್ಗೆ ಮುಖ್ಯಮಂತ್ರಿಗಳಿಗೆ ಕಾಳಜಿ ಇದ್ದು, ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲು ಕಾರಣಕರ್ತರಾಗಿದ್ದಾರೆ ಎಂದು ಹೇಳಿದ್ದಾರೆ.


Spread the love

About Laxminews 24x7

Check Also

ಫೆ.9ರಿಂದ ಮೆಟ್ರೋ ದರ ಏರಿಕೆಗೆ ಸರ್ಕಾರ ಒಪ್ಪಿಗೆ?

Spread the loveಬೆಂಗಳೂರು: ಮೆಟ್ರೋ  ಪ್ರಯಾಣಿಕರಿಗೆ ಮತ್ತೊಮ್ಮೆ ಶಾಕ್ ಎದುರಾಗಿದೆ. ಫೆಬ್ರವರಿ 9ರಿಂದ ಮತ್ತೆ ಮೆಟ್ರೋ ದರ ಏರಿಕೆಯಾಗುವ ಸಾಧ್ಯತೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ