ಹಾಸನ, (ಡಿಸೆಂಬರ್ 15): ನನಗೆ ಸರ್ಕಾರಿ ನೌಕರಿನೇ ಬೇಡ ಎನ್ನುವಂತಾಗಿದೆ ಎಂದು ಸರ್ಕಾರಿ ನೌಕರರ ಕೆಲಸದ ಒತ್ತಡದ ಬಗ್ಗೆ ಹೊಳೆನರಸೀಪುರ ತಹಶೀಲ್ದಾರ್ ಕೆ.ಕೆ.ಕೃಷ್ಣಮೂರ್ತಿ ಅವರು ಹೊರಹಾಕಿದ್ದಾರೆ. .
ಸರ್ಕಾರಿ ನೌಕರರ ಸಂಘದ ನೂತನ ಸದಸ್ಯರ ಪದಗ್ರಹಣ ಸಮಾರಂಭದಲ್ಲಿ ಮಾತನಾಡಿದ ಅವರು, ನಾನು ಒಬ್ಬ ತಹಶೀಲ್ದಾರ್, ಒಂದು ತಾಲ್ಲೂಕಿನ ಆಡಳಿತದ ಮುಖ್ಯಸ್ಥನಾಗಿದ್ದೇನೆ.
ಈಗ ನನಗೆ ಸರ್ಕಾರಿ ನೌಕರಿನೇ ಬೇಡ ಎನ್ನವಂತಾಗಿದೆ. ಪಾನಿಪುರಿ, ಗೋಬಿ ಮಂಚೂರಿ ಅಂಗಡಿ ಇಟ್ಟುಕೊಂಡಿರುವವರು ಸುಖವಾಗಿ ಜೀವನ ಮಾಡುತ್ತಾರೆ.
ಅವರಿಗೆ ಅಷ್ಟು ಸಮಾಧಾನ, ನೆಮ್ಮದಿ ಇದೆ. ಹೆಂಡ್ತಿ ಮಕ್ಕಳ ಜೊತೆ ಕಾಲ ಕಳೆಯುತ್ತಾನೆ. ಹೆಂಡ್ತಿ, ಮಕ್ಕಳನ್ನು ಊರಿಗೆ, ಎಲ್ಲಿ ಬೇಕಾದರೂ ಕರೆದುಕೊಂಡು ಹೋಗುತ್ತಾನೆ.
ದುರದೃಷ್ಟವಶಾತ್ ನಮ್ಮ ಕುಟುಂಬವನ್ನು ದೇವಸ್ಥಾನಕ್ಕೆ ಕರೆದುಕೊಂಡು ಹೋಗಲು ಆಗ್ತಿಲ್ಲ. ನಮಗೆ ಬರೀ ಒತ್ತಡ, ಒತ್ತಡ, ಒತ್ತಡ, ಒತ್ತಡ ಎಂದು ತಮ್ಮ ನೋವುಗಳನ್ನು ಹೊರಹಾಕಿದ್ದಾರೆ.ಶಾಸಕಾಂಗ ಶಾಸನಗಳನ್ನು ಮಾಡಿಕೊಳ್ಳುತ್ತಾರೆ. ಅವುಗಳನ್ನು ಕಾರ್ಯರೂಪಕ್ಕೆ ತರುವುದು ನಮ್ಮ ಕೆಲಸ. ಎಲ್ಲಾ ಇಲಾಖೆಗಳ ಸವಲತ್ತುಗಳನ್ನು ಎಲ್ಲರಿಗೂ ತಲುಪಿಸಬೇಕು. ಇತ್ತೀಚೆಗೆ ಮೊಬೈಲ್ ಬಂದಿದೆ, ಅದರಲ್ಲಿ ನಮ್ಮ ಪ್ರೊಗ್ರಾಸ್ ವೀಕ್ಷಣೆ ಮಾಡ್ತಾರೆ. ಶೋಕಾಸ್ ನೋಟೀಸ್ ಕೊಡ್ತಾರೆ, ಒತ್ತಡ ಹೇರುತ್ತಾರೆ, ವರ್ಕ್ ಆಫ್ ಲೋಡ್ ಜಾರಿ ಮಾಡ್ತಾರೆ, ಇಲಾಖೆ ವಿಚಾರಣೆ ನಡೆಸುತ್ತಾರೆ. ವಾಟ್ಸಪ್ ಗ್ರೂಪ್ ಮಾಡುತ್ತಾರೆ, ಸಂಜೆಯೊಳಗೆ ನಾವು ವರದಿ ಕೊಡಬೇಕು. ಅಷ್ಟು ಚಿತ್ರಹಿಂಸೆ ಆಗುತ್ತಿದೆ ಎಂದಿದ್ದಾರೆ.
Laxmi News 24×7