Breaking News

ಸೊಸೆಯನ್ನ ಮಂಚಕ್ಕೆ ಕರೆದ ಮಾವ : ಬರಲೊಪ್ಪದಕ್ಕೆ ಆಕೆಯ ಜೀವವನ್ನೇ ತೆಗೆದ!

Spread the love

ರಾಯಚೂರು, (ಡಿಸೆಂಬರ್ 15) : ಅತ್ಯಾಚಾರಕ್ಕೆ ಯತ್ನಸಿದ ವೇಳೆ ನಿರಾಕರಿಸಿದ್ದಕ್ಕೆ ಮಾವನೇ ತನ್ನ ಸೊಸೆಯನ್ನು ಬರ್ಬರವಾಗಿ ಕೊಲೆಗೈದಿರುವ ಘಟನೆ ರಾಯಚೂರಿನ (Raichuru) ಜುಲಮಗೇರಾ ಗ್ರಾಮದಲ್ಲಿ ನಡೆದಿದೆ. ದುಳ್ಳಮ್ಮ (27) ಮೃತ ಮಹಿಳೆ. ರಾಮಲಿಂಗಯ್ಯ ಎನ್ನುವಾತ ಇದಕ್ಕೂ ಮುಂಚೆ ಎರಡ್ಮೂರು ಬಾರಿ ಸೊಸೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದ. ಬಳಿಕ ಗ್ರಾಮದ ಹಿರಿಯರು, ಕುಟುಂಬಸ್ಥರು ರಾಮಲಿಂಗಯ್ಯಗೆ ಬೈದು ಬುದ್ಧಿ ಹೇಳಿದ್ದರು. ಆದರೂ ಬುದ್ಧಿ ಕಲಿಯದ ಕಾಮುಕ ಮಾವ ರಾಮಲಿಂಗಯ್ಯ, ಮನೆಯಲ್ಲಿ ಯಾರು ಇಲ್ಲದ ವೇಳೆ ಮತ್ತೆ ಸೊಸೆ ದುಳ್ಳಮ್ಮನ ಮೇಲೆ ಅತ್ಯಾಚಾರ ಎಸಗಲು ಮುಂದಾಗಿದ್ದಾನೆ. ಆದ್ರೆ, ಇದಕ್ಕೆ ಸೊಸೆ ನಿರಾಕರಿಸಿದ್ದಕ್ಕೆ ಆಕೆಯನ್ನು ಸಲಾಕೆಯಿಂದ ತಲೆಗೆ ಹೊಡೆದು ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದಾನೆ.ಈಗಾಗಲೇ ಎರಡ್ಮೂರು ಬಾರಿ ಸೊಸೆ ಧೂಳಮ್ಮನನ್ನು ಲೈಂಗಿಕವಾಗಿ ಬಳಸಿಕೊಳ್ಳಲು ಪ್ರಯತ್ನಿಸಿದ್ದಾನೆ.

ಆದ್ರೆ, ಇದಕ್ಕೆ ಧೂಳಮ್ಮ ವಿರೋಧಿಸಿದ್ದಾಳೆ. ಆದ್ರೆ. ನಿನ್ನೆ(ಡಿಸೆಂಬರ್ 14) ಮನೆಯಲ್ಲಿ ಎಲ್ಲರೂ ಕೆಲಸಕ್ಕೆ ಹೋದ ವೇಳೆ ಧೂಳಮ್ಮನ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಇದಕ್ಕೆ ವಿರೋಧ ವ್ಯಕ್ತಪಡಿಸಿದ ಸೊಸೆ ಮಾವನಿಂದ ತಪ್ಪಿಸಿಕೊಂಡು ಓಡಿ ಹೋಗುತ್ತಿದ್ದಾಗ ಹಿಂಬಾಲಿಸಿಕೊಂಡು ಹೋಗಿ ಸಲಿಕೆಯಿಂದ ತಲೆಗೆ ಒಡೆದು ಪರಾರಿಯಾಗಿದ್ದಾನೆ. ಪರಿಣಾಮ ಸೊಸೆ ಧೂಳಮ್ಮ ಸ್ಥಳದಲ್ಲೇ ಉಸಿರು ಚೆಲ್ಲಿದ್ದಾಳೆ.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ