Breaking News

ವಿಶ್ವವಿಖ್ಯಾತ ತಬಲಾ ಮಾಂತ್ರಿಕ ಜಾಕಿರ್ ಹುಸೇನ್ (Zakir Hussain) ನಿಧನರಾಗಿದ್ದಾರೆ.

Spread the love

ಡಿಸೆಂಬರ್​ : ವಿಶ್ವವಿಖ್ಯಾತ ತಬಲಾ ಮಾಂತ್ರಿಕ (73) ಜಾಕಿರ್ ಹುಸೇನ್ (Zakir Hussain) ನಿಧನರಾಗಿದ್ದಾರೆ. 73 ವಯಸ್ಸಿನ ಜಾಕಿರ್ ಅವರಿಗೆ ಕಳೆದ ಎರಡು ವಾರಗಳಿಂದ ಹೃದಯ ಸಂಬಂಧಿ ಸಮಸ್ಯೆ ಕಾಣಿಸಿಕೊಂಡಿದ್ದು, ಹೀಗಾಗಿ ಅಮೆರಿಕದ ಸ್ಯಾನ್ ಫ್ರಾನ್ಸಿಸ್ಕೋ ಆಸ್ಪತ್ರೆಯೊಂದಕ್ಕೆ ದಾಖಲಿಸಲಾಗಿತ್ತು.

ಆದರೆ ಭಾನುವಾರ ತಮ್ಮ ಕೊನೆಯುಸಿರೆಳೆದಿದ್ದಾರೆ. ಜಾಕಿರ್ ಹುಸೇನ್ ನಿಧನಕ್ಕೆ ಹಲವು ಗಣ್ಯರು ಕಂಬನಿ ಮಿಡಿದಿದ್ದಾರೆ.ಭಾರತದ ಅತ್ಯಂತ ಪ್ರಸಿದ್ಧ ಶಾಸ್ತ್ರೀಯ ಸಂಗೀತಗಾರರಲ್ಲಿ ಒಬ್ಬರಾಗಿರುವ ಜಾಕಿರ್ ಹುಸೇನ್​, ಪ್ರಸಿದ್ಧ ತಬಲಾ ವಾದಕ ಅಲ್ಲಾ ರಖಾರವರ ಹಿರಿಯ ಪುತ್ರ. ಮಾರ್ಚ್ 9, 1951 ರಂದು ಮುಂಬೈನಲ್ಲಿ ಜನಿಸಿದ ಜಾಕಿರ್ ಹುಸೇನ್, ಚಿಕ್ಕ ವಯಸ್ಸಿನಿಂದಲೂ ಸಂಗೀತದ ವಾತಾವರಣದಲ್ಲಿ ಬೆಳೆದವರು.

ಅವರ ತಂದೆಯ ಕಟ್ಟುನಿಟ್ಟಿನ ಮಾರ್ಗದರ್ಶನದಲ್ಲಿ ಜಾಕಿರ್ ಹುಸೇನ್​​ ಅಸಾಧಾರಣ ಪ್ರತಿಭೆಯಾಗಿ ಹೊರಹೊಮ್ಮಿದರು.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ