Breaking News

ಪತ್ರಕರ್ತನ ಮೇಲೆ ಹಲ್ಲೆ ಮಾಡಿದ್ದಕ್ಕೆ ಕ್ಷಮೆ ಕೇಳಿದ ನಟ ಮೋಹನ್ ಬಾಬು

Spread the love

ಖ್ಯಾತ ನಟ ಮೋಹನ್ ಬಾಬು ಅವರ ಕುಟುಂಬದಲ್ಲಿ ಬಿರುಕು ಮೂಡಿದ್ದು, ಆ ಕುರಿತು ವರದಿ ಮಾಡಲು ತೆರಳಿದ್ದ ಪತ್ರಕರ್ತರ ಮೇಲೆ ಅವರು ಕೋಪಗೊಂಡಿದ್ದರು.

ವಿವಾದದ ಕುರಿತು ಪ್ರಶ್ನೆ ಕೇಳಿದ ಟಿವಿ9 ವರದಿಗಾರ ರಂಜಿತ್ ಕುಮಾರ್​ ಮೇಲೆ ಮೋಹನ್​ ಬಾಬು ಅವರು ಹಲ್ಲೆ ಮಾಡಿದ್ದರು.

ಅವರ ವಿರುದ್ಧ ಪ್ರಕರಣ ದಾಖಲಾಗಿತ್ತು. ಸದ್ಯಕ್ಕೆ ರಂಜಿತ್ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಸ್ಪತ್ರೆಗೆ ತೆರಳಿ ರಂಜಿತ್ ಕುಮಾರ್​ ಅವರ ಆರೋಗ್ಯವನ್ನು ಮೋಹನ್ ಬಾಬು ವಿಚಾರಿಸಿದ್ದಾರೆ. ಅಲ್ಲದೇ, ಅವರ ಬಳಿ ಕ್ಷಮೆ ಕೇಳಿದ್ದಾರೆ.

ಮೋಹನ್ ಬಾಬು ಅವರು ನನಗೆ, ನನ್ನ ಕುಟುಂಬಕ್ಕೆ ಹಾಗೂ ಇಡೀ ಪತ್ರಕರ್ತರ ಸಮೂಹಕ್ಕೆ ಕ್ಷಮೆ ಕೇಳಿದ್ದಾರೆ’ ಎಂದು ರಂಜಿತ್ ಹೇಳಿಕೆ ನೀಡಿರುವುದಾಗಿ ಪಿಟಿಐ ಸುದ್ದಿಸಂಸ್ಥೆ ವರದಿ ಮಾಡಿದೆ.

ರಂಜಿತ್ ಗುಣಮುಖರಾಗಿ ರಿಸ್ಚಾರ್ಜ್​ ಆದ ಬಳಿಕ ಮನೆಗೂ ಭೇಟಿ ನೀಡಿರುವುದಾಗಿ ಮೋಹನ್ ಬಾಬು ಹೇಳಿದ್ದಾರೆ ಎಂದು ವರದಿ ಆಗಿದೆ.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ