Breaking News

ಪತ್ನಿ ಕಾಟಕ್ಕೆ ಬೆಂಗಳೂರಿನಲ್ಲಿ ಮತ್ತೋರ್ವ ವ್ಯಕ್ತಿ ಬಲಿ

Spread the love

ಡಿಸೆಂಬರ್​ 16: ದೇಶದಾದ್ಯಂತ ಟೆಕ್ಕಿ ಅತುಲ್ ಸುಭಾಷ್ (Atul Subhash) ಆತ್ಮಹತ್ಯೆ ಪ್ರಕರಣ ಚರ್ಚೆಯಾಗುತ್ತಿರುವ ಹೊತ್ತಿನಲ್ಲೇ, ಹೆಂಡತಿ, ಮಾವನ ಕಿರುಕುಳಕ್ಕೆ ಬೇಸತ್ತು ಪೊಲೀಸ್​ ಕಾನ್‌ಸ್ಟೇಬಲ್ ತಿಪ್ಪಣ್ಣ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆಗೆ ಶರಣಾಗಿದ್ದರು. ಇದರ ಬೆನ್ನಲ್ಲೇ ಇದೀಗ ಹೆಂಡತಿಯ ಕಿರುಕುಳ ಆರೋಪದಲ್ಲಿ ಬೆಂಗಳೂರಿನಲ್ಲಿ ಮತ್ತೊಂದು ಸಾವಾಗಿದೆ. ಹೌದು.

ಪತ್ನಿಯ ಕಿರುಕುಳ ಹಾಗೂ ಅಕ್ರಮ ಸಂಬಂಧದಿಂದ ಬೇಸತ್ತು ಬಾಲರಾಜ್(41) ಎನ್ನುವ ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಂಗಳೂರು ಉತ್ತರ ತಾಲೂಕಿನ ಹೆಸರಘಟ್ಟ ರಸ್ತೆ ಸಿಲುವೆಪುರದಲ್ಲಿ ಈ ಘಟನೆ ನಡೆದಿದೆ

.18 ವರ್ಷದ ಹಿಂದೆ ಪತ್ನಿ ಕುಮಾರಿಯನ್ನ ಬಾಲರಾಜ್ ಎರಡನೇ ಮದುವೆಯಾಗಿದ್ದರು. ಕಿರುಕುಳದ ಜೊತೆಗೆ ಅಕ್ರಮ ಸಂಬಂಧ ಹೊಂದಿರುವ ಆರೋಪ ಕೂಡ ಮಾಡಲಾಗಿದ್ದು, ಗಲಾಟೆ ನಡೆದಿದೆ. ಗಲಾಟೆ ಬಳಿಕ ಮನೆ ತೊರೆದು ಪತ್ನಿ ತವರು ಸೇರಿದ್ದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ