Breaking News

ಸುವರ್ಣಸೌಧದಲ್ಲಿ ಬಾಪೂಜಿ ಜೀವನ ಚರಿತ್ರೆಯ ಅಪರೂಪದ ಫೋಟೋಗಳ ಪ್ರದರ್ಶನ

Spread the love

ಬೆಳಗಾವಿ: ಕುಂದಾನಗರಿ ಈಗ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವಕ್ಕೆ ಸಜ್ಜಾಗುತ್ತಿದೆ. ಇದರ ನಡುವೆ ಚಳಿಗಾಲದ ಅಧಿವೇಶನ ನಡೆಯುತ್ತಿರುವ ಸುವರ್ಣ ವಿಧಾನಸೌಧದಲ್ಲಿ ಮಹಾತ್ಮ ಗಾಂಧೀಜಿ ಅವರ ಇಡೀ ಜೀವನ ಸಾರುವ ಚಿತ್ರಗಳ ಪ್ರದರ್ಶನ ಆಯೋಜಿಸಲಾಗಿದೆ. ಕಲಾಪ ವೀಕ್ಷಣೆಗೆ ಸುವರ್ಣ ಸೌಧಕ್ಕೆ ಬರುತ್ತಿರುವ ವಿದ್ಯಾರ್ಥಿಗಳು, ಸಾರ್ವಜನಿಕರು ಮಹಾತ್ಮ ಗಾಂಧೀಜಿ ಅವರ ಚಿತ್ರಗಳನ್ನೂ ಕಂಡು ಇತಿಹಾಸವನ್ನು ಮೆಲುಕು ಹಾಕುತ್ತಿದ್ದಾರೆ.

ಬೆಳಗಾವಿಯಲ್ಲಿ 1924ರ ಡಿ.26, 27ರಂದು ನಡೆದ ಕಾಂಗ್ರೆಸ್ ಅಧಿವೇಶನ ಮಹಾತ್ಮ ಗಾಂಧೀಜಿ ಅಧ್ಯಕ್ಷತೆ ವಹಿಸಿದ್ದ ಏಕೈಕ ಅಧಿವೇಶನ. ಈ ಐತಿಹಾಸಿಕ ಅಧಿವೇಶನಕ್ಕೆ ಈಗ ಶತಮಾನದ ಸಂಭ್ರಮ. ಹಾಗಾಗಿ, ರಾಜ್ಯ ಸರ್ಕಾರ ವರ್ಷವಿಡೀ ‘ಗಾಂಧಿ ಭಾರತ’ ಹೆಸರಿನಲ್ಲಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ. ಅದರ ಭಾಗವಾಗಿ ಬೆಳಗಾವಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಮತ್ತು ಕೆಆರ್‌ಐಡಿಎಲ್ ವತಿಯಿಂದ ಸುವರ್ಣ ವಿಧಾನಸೌಧದಲ್ಲಿ ಗಾಂಧಿ ಅವರ ವಿಶೇಷ ಫೋಟೋಗಳ ಪ್ರದರ್ಶನ ಆಯೋಜಿಸಲಾಗಿದೆ. ದೆಹಲಿಯ ಗಾಂಧಿ ಮ್ಯೂಸಿಯಂನಿಂದ ಈ ಫೋಟೋಗಳನ್ನು ತರಲಾಗಿದ್ದು, ಗಾಂಧೀಜಿಯ ಇಡೀ ಜೀವನವನ್ನು ಫೋಟೋಗಳಲ್ಲಿ ನೋಡಬಹುದು


Spread the love

About Laxminews 24x7

Check Also

ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನದ ಪೂರ್ವಭಾವಿ ಸಭೆ

Spread the loveಬೆಳಗಾವಿ: ನವದೆಹಲಿಯ ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನಕ್ಕಾಗಿ ಬೆಳಗಾವಿ ಜಿಲ್ಲೆಯನ್ನು ಪ್ರಾಯೋಗಿಕವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ