Breaking News

ಡಿಸೆಂಬರ್ 31 ರವರೆಗೆ ಹೆಚ್ಎಸ್​ಆರ್​ಪಿ ನಂಬರ್ ಪ್ಲೇಟ್ ಆಳವಡಿಕೆಗೆ ಗಡುವು

Spread the love

ಬೆಂಗಳೂರು, ಡಿಸೆಂಬರ್ 18: ರಾಜ್ಯದಲ್ಲಿ ಎಷ್ಟು ಜನಸಂಖ್ಯೆ ಇದೆಯೋ ಸುಮಾರು ಅಷ್ಟೇ ವಾಹನಗಳನ್ನು ಕೂಡ ಜನ ಖರೀದಿ ಮಾಡಿದ್ದಾರೆ.

ಒಂದೊಂದು ಮನೆಯಲ್ಲೂ ಕೂಡ ಮೂರ್ನಾಲ್ಕಕ್ಕಿಂತ ಹೆಚ್ಚು ವಾಹನಗಳಿವೆ. ಇತ್ತೀಚೆಗಂತೂ ಎಲ್ಲವೂ ಡಿಜಿಟಲ್ ಯುಗ ಆಗಿ ಹೋಗಿದೆ.

ಇದಕ್ಕೆ ಪೂರಕವಾಗುವಂತೆ ಈಗಾಗಲೇ ಸಾರಿಗೆ ಇಲಾಖೆ 2019 ರ ಮಾರ್ಚ್ – 31 ರ ಹಿಂದಿನ ಹಳೆಯ ಎರಡು ಕೋಟಿಗೂ ಹೆಚ್ಚಿನ ವಾಹನಗಳಿಗೆ ಹೈಟೆಕ್ ಟಚ್ ಕೊಡಲು ಸಿದ್ಧವಾಗಿತ್ತು. ಆದರೆ ಯಾಕೋ ಹೆಚ್​ಎಸ್​ಆರ್​ಪಿ ನಂಬರ್ ಪ್ಲೇಟ್ ಅಳವಡಿಸಿಕೊಳ್ಳಲು ಮಾತ್ರ ಸಿದ್ಧವಿಲ್ಲ.

ಈಗಾಗಲೇ ಸಾರಿಗೆ ಇಲಾಖೆ ಹೆಚ್ಎಸ್​ಆರ್​ಪಿ ನಂಬರ್ ಪ್ಲೇಟ್ ಅಳವಡಿಸಲು ಐದು ಬಾರಿ ಗಡುವು ವಿಸ್ತರಣೆ ಮಾಡಿದೆ. ಈ ಬಾರಿ ಕೊನೆಯದಾಗಿ ಡಿಸೆಂಬರ್ 31 ರವರೆಗೆ ಹೆಚ್ಎಸ್​ಆರ್​ಪಿ ನಂಬರ್ ಪ್ಲೇಟ್ ಆಳವಡಿಕೆಗೆ ಗಡುವು ಕೊಟ್ಟಿದೆ.

ಗಡುವು ಮುಗಿದ ಕೂಡಲೇ ದಂಡ ವಿಧಿಸಲು ಸಾರಿಗೆ ಇಲಾಖೆ ಮುಂದಾಗಿತ್ತು. ಆದರೆ, ಇದಕ್ಕೆ ಸದ್ಯ ಹೈಕೋರ್ಟ್ ರಿಲೀಫ್ ನೀಡಿದೆ.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ