ವಿಜಯೇಂದ್ರ ಔತಣಕೂಟಕ್ಕೆ ನಾನು ಹೊಗಿಲ್ಲ, ರಮೇಶ್ ಜಾರಕಿಹೊಳಿ ಕೂಡ ಹೋಗಲ್ಲ:ಯತ್ನಾಳ್
Laxminews 24x7
ಡಿಸೆಂಬರ್ 18, 2024
ರಾಜಕೀಯ, ರಾಜ್ಯ
61 Views
ಇತ್ತೀಚೆಗಷ್ಟೇ ದೆಹಲಿಗೆ ತೆರಳಿ ಹೈಕಮಾಂಡ್ ಶಿಸ್ತು ಸಮಿತಿ ನೋಟಿಸ್ಗೆ ಉತ್ತರಿಸಿ ಬಂದಿದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಇದೀಗ ಮತ್ತೆ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹಾಗೂ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧ ಬಹಿರಂಗ ವಾಗ್ದಾಳಿ ನಡೆಸಿದ್ದಾರೆ.:
ಬೆಳಗಾವಿ ಅಧಿವೇಶನದ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಆಯೋಜಿಸಿದ್ದ ಔತಣ ಕೂಟದಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಭಾಗವಹಿಸಿಲ್ಲ. ಈ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹಾಗೂ ಬಿವೈ ವಿಜಯೇಂದ್ರ ವಿರುದ್ಧ ಬಹಿರಂಗವಾಗಿ ವಾಗ್ದಾಳಿ ನಡೆಸಿದ್ದಾರೆ.ವಿಜಯೇಂದ್ರ ಔತಣಕೂಟಕ್ಕೆ ನಾನು ಹೊಗಿಲ್ಲ, ರಮೇಶ್ ಜಾರಕಿಹೊಳಿ ಕೂಡ ಹೋಗಲ್ಲ. ಅವರು ಇಲ್ಲಿ ಔತಣ ಕೂಟಕ್ಕೆ ಕರೆಯುತ್ತಾರೆ. ದಾವಣಗೆರೆಯಲ್ಲಿ ಚೇಲಾಗಳನ್ನು ಬಿಟ್ಟು ಸಭೆ ಮಾಡುತ್ತಾರೆ. ಅವರ ಗನ್ಮ್ಯಾನ್ಗಳಿಂದ ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ ಎಂದು ಯತ್ನಾಳ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.