ಕನ್ನಡ ಚಿತ್ರರಂಗದ ಹ್ಯಾಟ್ರಿಕ್ ಹೀರೋ ಶಿವರಾಜ್ಕುಮಾರ್ ತಮ್ಮ ಅನಾರೋಗ್ಯದ ಚಿಕಿತ್ಸೆಗಾಗಿ ಇಂದು ಸಂಜೆ ಅಮೆರಿಕಕ್ಕೆ ಪ್ರಯಾಣ ಬೆಳೆಸಲಿದ್ದಾರೆ. ಸಿನಿಮಾ ಮೇಲಿನ ಒಲವು, ಪರಿಶ್ರಮ, ಅಮೋಘ ಅಭಿನಯದಿಂದ ಚಂದನವನದಲ್ಲಿ ತಮ್ಮದೇ ಆದ ಸ್ಟಾರ್ಡಮ್ ಗಿಟ್ಟಿಸಿಕೊಂಡಿರುವ ನಟ ತಮ್ಮ ಎಲ್ಲಾ ಬದ್ಧತೆಗಳನ್ನು ಪೂರ್ಣಗೊಳಿಸಿ, ವಿದೇಶಕ್ಕೆ ತೆರಳುತ್ತಿದ್ದಾರೆ.
ನಿಮಗೆ ಈಗಾಗಲೇ ತಿಳಿಸಿರುವಂತೆ, ಅನಾರೋಗ್ಯದ ಹಿನ್ನೆಲೆ ಅಮೆರಿಕದಲ್ಲಿ ಶಸ್ತ್ರ ಚಿಕಿತ್ಸೆಗೆ ಒಳಗಾಗಲಿದ್ದಾರೆ. ಅಮೆರಿಕದ ಫ್ಲೋರಿಡಾದಲ್ಲಿರುವ ಮಿಯಾಮಿಯಲ್ಲಿ ಡಿಸೆಂಬರ್ 24ರಂದು ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳಲಿದ್ದಾರೆ. ಸರ್ಜರಿ ಬಳಿಕ ವಿಶ್ರಾಂತಿ ಪಡೆಯಲಿದ್ದಾರೆ. ಸದ್ಯ ವಿವಿಧ ಸೋಷಿಯಲ್ ಮೀಡಿಯಾ ಪ್ಲ್ಯಾಟ್ಫಾರ್ಮ್ಗಳಲ್ಲಿ ಅಭಿಮಾನಿಗಳು ಶೀಘ್ರ ಗುಣಮುಖರಾಗಿ ಬನ್ನಿ ಶಿವಣ್ಣ ಎಂದು ಹಾರೈಸುತ್ತಿದ್ದಾರೆ.ಇತ್ತೀಚೆಗೆ ಶಿವಮೊಗ್ಗದಲ್ಲಿ ಮಾತನಾಡಿದ್ದ ಹ್ಯಾಟ್ರಿಕ್ ಹೀರೋ, ಸದ್ಯ ನಾನು ಆರೋಗ್ಯವಾಗಿದ್ದೇನೆ. ಬರುವ ತಿಂಗಳು ಅಮೆರಿಕಕ್ಕೆ ತೆರಳಿ ಚಿಕಿತ್ಸೆ ಪಡೆಯಲಿದ್ದೇನೆ. ಜನವರಿಯಿಂದ ಪುನಃ ಶೂಟಿಂಗ್‌ನಲ್ಲಿ ಭಾಗಿಯಾಗಲಿದ್ದೇನೆ ಎಂದು ತಿಳಿಸಿದ್ದರು.