ಬೆಳಗಾವಿ: “ಗ್ಯಾರಂಟಿ ಯೋಜನೆಗಳನ್ನು ನೀಡಿರುವುದೇ ತಪ್ಪು ಎಂಬಂತೆ ವಿರೋಧ ಪಕ್ಷಗಳು ಇವುಗಳನ್ನು ಬಿಟ್ಟಿ ಭಾಗ್ಯ ಎಂದು ಟೀಕಿಸುತ್ತಿವೆ” ಎಂದು ಮಾಜಿ ಸಚಿವ ಹಾಗೂ ರಾಜ್ಯ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ ಬೇಸರ ವ್ಯಕ್ತಪಡಿಸಿದ್ದಾರೆ.
ಸುವರ್ಣಸೌಧದಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ವಿರೋಧ ಪಕ್ಷಗಳ ಟೀಕೆಯಿಂದ ನಮ್ಮ ಗ್ಯಾರಂಟಿ ಯೋಜನೆಗಳು ಪ್ರಚಾರ ಕಳೆದುಕೊಳ್ಳುತ್ತಿವೆ. ನಮ್ಮ ಸರ್ಕಾರದ ಯೋಜನೆಗಳಿಗೆ ಹೆಚ್ಚು ಪ್ರಚಾರ ದೊರೆಯುವ ಕೆಲಸವಾಗಬೇಕು. ಗ್ಯಾರಂಟಿಗಳು ಮಧ್ಯವರ್ತಿಗಳ ಹಾವಳಿಯಿಲ್ಲದೆ ನೇರವಾಗಿ ಫಲಾನುಭವಿಗಳನ್ನು ತಲುಪುತ್ತಿದೆ. ಈ ವಾಸ್ತವತೆಯನ್ನು ನಾವು ಅರಿತುಕೊಳ್ಳಬೇಕು” ಎಂದರು.
ಒದಗಿಸುವ ಬಗ್ಗೆ ಪಕ್ಷದ ಶಾಸಕಾಂಗ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಮಳೆಹಾನಿಯಿಂದ ಹಾಳಾದ ರಸ್ತೆಗಳು, ಹಳ್ಳಿಗಾಡಿನ ಜನರಿಗೆ ಮೂಲಭೂತ ಸೌಕರ್ಯ ಒದಗಿಸುವ ಕುರಿತು ಶಾಸಕಾಂಗ ಸಭೆಯಲ್ಲಿ ಚರ್ಚೆಯಾಗಿದೆ. ಈ ಎಲ್ಲ ಕೆಲಸಗಳಿಗೆ ಹಣ ನೀಡಲು ಮುಖ್ಯಮಂತ್ರಿಗಳು ಒಪ್ಪಿಗೆ ಸೂಚಿಸಿದ್ದಾರೆ” ಎಂದು ತಿಳಿಸಿದರು.
“ರಾಜ್ಯದಲ್ಲಿ ಆಯ್ದ ಹಾಗೂ ಅತೀ ಅವಶ್ಯಕವಿರುವ ನೂತನ ಕಾಮಗಾರಿಗಳಿಗೆ ನಾಲ್ಕು ಸಾವಿರ ಕೋಟಿ ರೂಪಾಯಿಗಳನ್ನು ಬಿಡುಗಡೆಗೆ ಮುಖ್ಯಮಂತ್ರಿಗಳು ಸಮ್ಮತಿ ಸೂಚಿಸಿದ್ದಾರೆ. ಹಳ್ಳಿಗಳ ರಸ್ತೆಗಳ ಸುಧಾರಣೆಗೆ 2 ಸಾವಿರ ಕೋಟಿ ರೂಪಾಯಿಗಳಷ್ಟು ನೀಡಲು ಒತ್ತಾಯಿಸಿದ ಬೆನ್ನಲ್ಲೇ ಅದಕ್ಕೂ ಸಿದ್ದರಾಮಯ್ಯನವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ” ಎಂದು ಮಾಹಿತಿ ನೀಡಿದರು.