Breaking News

ಸಿದ್ದಗಂಗಾ ಮಠಕ್ಕೆ 70 ಲಕ್ಷ ರೂ. ವಿದ್ಯುತ್‌ ಬಿಲ್‌

Spread the love

ಡಿಸೆಂಬರ್ 19: ತುಮಕೂರಿನ ಸಿದ್ದಗಂಗಾ ಮಠಕ್ಕೆ 70 ಲಕ್ಷ ರೂ. ವಿದ್ಯುತ್‌ ಬಿಲ್‌ ಪಾವತಿಸುವಂತೆ ಕೆಐಎಡಿಬಿ (ಕರ್ನಾಟಕ ಕೈಗಾರಿಕಾ ಅಭಿವೃದ್ಧಿ ಮಂಡಳಿ) ನೋಟಿಸ್ ನೀಡಿದ ವಿಚಾರ ಈಗ ಚರ್ಚೆಗೆ ಗ್ರಾಸವಾಗಿದೆ. ಕೆಐಎಡಿಬಿ ಮಂಡಳಿಯ ಆರ್ಥಿಕ ಪರಿಸ್ಥಿತಿ ಸರಿ ಇಲ್ಲವೇ? ಸಿದ್ದಗಂಗಾ ಮಠಕ್ಕೆ ವಿದ್ಯುತ್‌ ಬಿಲ್‌ ನೋಟಿಸ್‌ ಏಕೆ? ‘ತ್ರಿವಿಧ ದಾಸೋಹ’ದ ಮಠಕ್ಕೆ ನೀರು ಪೂರೈಕೆ ಸಾಧ್ಯವಾಗುತ್ತಿಲ್ಲವೇ ಎಂಬ ಪ್ರಶ್ನೆ ಉದ್ಭವಿಸಿದೆ. ಪ್ರತಿಪಕ್ಷಗಳು ಕೂಡ ಈ ವಿಚಾರವಾಗಿ ಆಕ್ಷೇಪ ವ್ಯಕ್ತಪಡಿಸಿವೆ.ಸಿದ್ದಗಂಗಾ ಮಠಕ್ಕೆ 70 ಲಕ್ಷ ರೂ. ವಿದ್ಯುತ್‌ ಬಿಲ್‌ ನೋಟಿಸ್‌: ವಿವಾದಕ್ಕೀಡಾದ ಬೆನ್ನಲ್ಲೇ ಸರ್ಕಾರ ಯೂಟರ್ನ್

ಕೆಐಎಡಿಬಿಗೆ ಸಿದ್ದಲಿಂಗ ಸ್ವಾಮೀಜಿಗಳಿಂದ ಪತ್ರ

ವಿದ್ಯುತ್ ಬಿಲ್ ಪಾವತಿ ವಿಚಾರವಾಗಿ ಕೆಐಎಡಿಬಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳಿಗೆ ಶ್ರೀ ಸಿದ್ದಲಿಂಗ ಸ್ವಾಮೀಜಿ ಪತ್ರ ಬರೆದಿದ್ದಾರೆ. ದೇವರಾಯನಪಟ್ಟಣ ಕೆರೆಯಿಂದ ಸಿದ್ದಗಂಗಾ ಮಠಕ್ಕೆ ಕುಡಿಯುವ ನೀರಿನ ಉಪಯೋಗಕ್ಕೆ ಬಳಕೆ ಮಾಡಲು ಸ್ಥಾಪಿಸಲ್ಪಟ್ಟಿರುವ ಶುದ್ದೀಕರಣ ಘಟಕ ಇನ್ನೂ ಪ್ರಾರಂಭವಾಗಿಲ್ಲ. ಪ್ರಾಯೋಗಿಕವಾಗಿ ಕೆರೆ ನೀರನ್ನು ಭರ್ತಿ ಮಾಡಿರುತ್ತಾರೆ. ಶುದ್ಧೀಕರಣ ಘಟಕ ಪ್ರಾರಂಭವಾಗಬೇಕಾಗಿದ್ದು, ಸದರಿ ಶುದ್ದೀಕರಣ ಘಟಕದಿಂದ ಸಿದ್ದಗಂಗಾ ಮಠದ 10000 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಮತ್ತು ಪ್ರತಿನಿತ್ಯ ಮಠಕ್ಕೆ ಬರುವ ಭಕ್ತರಿಗೆ ಹಾಗೂ ಅಕ್ಕಪಕ್ಕದ ಗ್ರಾಮಗಳಾದ ದೇವರಾಯಪಟ್ಟಣ, ಮಾರನಾಯ್ಕನಪಾಳ್ಯ, ಬಸವಪಟ್ಟಣ, ಬಂಡೇಪಾಳ್ಯ ಸೇರಿದಂತೆ ಹಲವು ಹಳ್ಳಿಗಳಿಗೆ ನೀರು ಸರಬರಾಜು ವ್ಯವಸ್ಥೆ ಮಾಡಬೇಕಾಗಿರುತ್ತದೆ. ಇದರಿಂದ ಸಿದ್ದಗಂಗಾ ಮಠದಿಂದ ವಿದ್ಯುತ್ ಬಿಲ್ ಪಾವತಿ ಮಾಡಲು ಸಾಧ್ಯವಾಗುವುದಿಲ್ಲ. ಹಳ್ಳಿಗಳಿಗೆ, ಗ್ರಾಮಗಳಿಗೆ ಶುದ್ಧ ಕುಡಿಯುವ ನೀರು ಸರಬರಾಜು ಮಾಡುವುದು ಸರ್ಕಾರದ ಆದ್ಯ ಕರ್ತವ್ಯ. ಅದಕ್ಕಾಗಿ ಬರುವ ವಿದ್ಯುತ್ ಬಿಲ್ ಸರ್ಕಾರದಿಂದ ಪಾವತಿ ಮಾಡಬೇಕೇ ಹೊರತು ಸಂಘ ಸಂಸ್ಥೆಗಳು ಪಾವತಿ ಮಾಡಲು ಬರುವುದಿಲ್ಲ. ಕೆಐಎಡಿಬಿ ಅಧಿಕಾರಿಗಳು ಹಾಗೂ ಮೇಲಾಧಿಕಾರಿಗಳು ದೇವರಾಯಪಟ್ಟಣ ಕೆರೆಯ ನೀರನ್ನು ಸಿದ್ದಗಂಗಾ ಮಠದ ದೈನಂದಿನ ಕೆಲಸ ಕಾರ್ಯಗಳಿಗೆ ಬಳಕೆ ಮಾಡುತ್ತಿರುವುದಾಗಿ ನೀಡಿರುವ ವರದಿಯನ್ನು ಪುನರ್ ಪರಿಶೀಲಿಸಿ ಕುಡಿಯುವ ನೀರಿನ ಸೌಕರ್ಯವನ್ನು ಒದಗಿಸುವುದು ಸರ್ಕಾರದ ಆದ್ಯ ಕರ್ತವ್ಯ. ಇದನ್ನ ಪುನರ್ ಪರಿಶೀಲನೆ ಮಾಡಬೇಕೆಂದು ಕೋರುತ್ತೇವೆಂದು ಪತ್ರದಲ್ಲಿ ಸ್ವಾಮೀಜಿ ಉಲ್ಲೇಖಿಸಿದ್ದಾರೆ.


Spread the love

About Laxminews 24x7

Check Also

ಸಿ. ಟಿ ರವಿ ಘಟನೆ ಆಗಿ ಹೋಗಿದೆ. ಮತ್ತೆ ಅದನ್ನು ಮುಂದುವರಿಸುವುದರಲ್ಲಿ ಅರ್ಥ‌ ಇಲ್ಲ”:ಸತೀಶ ಜಾರಕಿಹೊಳಿ

Spread the loveಬೆಳಗಾವಿ: ವಿಧಾನಪರಿಷತ್ ಸದಸ್ಯ ಸಿ. ಟಿ ರವಿ ಆಕ್ಷೇಪಾರ್ಹ ಪದ ಬಳಕೆ ಆರೋಪ ಪ್ರಕರಣದ ಕುರಿತು ಜಿಲ್ಲಾ ಉಸ್ತುವಾರಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ