Breaking News

ಹೆಬ್ಬಾಳ್ಕರ್ ಬಗ್ಗೆ ಸಿಟಿ ರವಿ ಆಕ್ಷೇಪಾರ್ಹ ಪದ ಬಳಕೆ ಆರೋಪ: ಪರಿಷತ್​ನಲ್ಲಿ‌ ಗದ್ದಲ, ಸಭಾಪತಿಗೆ ದೂರು ಕೊಡಲು ಮುಂದಾದ ಕೈ ಸದಸ್ಯರು

Spread the love

ಬೆಳಗಾವಿ: ಕೇಂದ್ರ ಗೃಹ ಸಚಿವ ಅಮಿತ್ ಶಾ, ಡಾ.ಬಿ.ಆರ್.ಅಂಬೇಡ್ಕರ್ ಕುರಿತು ಅವಹೇನಕಾರಿ ಹೇಳಿಕೆ ಖಂಡಿಸಿ ವಿಧಾನ ಪರಿಷತ್​ನಲ್ಲಿ ಕಾಂಗ್ರೆಸ್- ಬಿಜೆಪಿ ಸದಸ್ಯರ ನಡುವೆ ವಾಗ್ವಾದ ನಡೆಯಿತು. ಇದೇ ವೇಳೆ ಮಾತಿನ ಭರದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಬಗ್ಗೆ ಸದಸ್ಯ ಸಿ.ಟಿ. ರವಿ ಅವರ ಆಕ್ಷೇಪಾರ್ಹ ಪದ ಬಳಕೆ ಕೈ ಸದಸ್ಯರ ಸಿಟ್ಟಿಗೆ ಕಾರಣವಾಯಿತು.

ಗದ್ದಲ ತೀವ್ರವಾಗುತ್ತಿದ್ದಂತೆ ಸದನವನ್ನು ಸಭಾಪತಿ ಕೆಲಕಾಲ ಮುಂದೂಡಿದರು. ಬಳಿಕ ಆಡಳಿತ ಸದಸ್ಯರು ದೂರು ನೀಡಲು ಸಭಾಪತಿ ಕೊಠಡಿಗೆ ತೆರಳಿದರು.

ಪ್ರಶ್ನೋತ್ತರ ಅವಧಿ ಮುಗಿದ ಮೇಲೆ ಶೂನ್ಯ ಅವಧಿಯಲ್ಲಿ ಅಮಿತ್ ಶಾ ಹೇಳಿಕೆ ಖಂಡಿಸಿ ಆಡಳಿತ ಸದಸ್ಯರು ಧರಣಿಗೆ ಮುಂದಾದರು. ಕೂಡಲೇ ಅಮಿತ್ ಶಾ ಅವರನ್ನು ಬಂಧಿಸಿ, ರಾಜೀನಾಮೆ ಪಡೆಯುವಂತೆ ಕೈ ಸದಸ್ಯರು ಆಗ್ರಹಿಸಿದರು. ಇದೇ ವೇಳೆ, ಬಿಜೆಪಿ ಸದಸ್ಯರು ಕೂಡ ಅಂಬೇಡ್ಕರ್ ಭಾವಚಿತ್ರ ಹಿಡಿದು ಅವರಿಗೆ ಅಪಮಾನ ಮಾಡಿದ್ದು ಕಾಂಗ್ರೆಸ್. ಅಂಬೇಡ್ಕರ್ ಅವರಿಗೆ ಭಾರತ ರತ್ನವನ್ನೂ ಅವರು ನೀಡಲಿಲ್ಲ ಎಂದು ಹರಿಹಾಯ್ದರು.

ಬಳಿಕ ರಾಹುಲ್ ಗಾಂಧಿ ಡ್ರಗ್ ಅಡಿಕ್ಟ್ ಎಂದು ಸಿ.ಟಿ.ರವಿ ಆರೋಪಿಸಿದರು. ಇದಕ್ಕೆ ಕೌಂಟರ್ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ನೀವು ರಸ್ತೆ ಅಪಘಾತದಲ್ಲಿ ಇಬ್ಬರನ್ನು ಕೊಲೆ ಮಾಡಿದ್ದೀರಿ, ಹಾಗಾಗಿ, ನೀವು ಕೊಲೆಗಾರರು ಎಂದು ದೂರಿದರು. ಆಗ ಸಿ.ಟಿ. ರವಿ, ಆಕ್ಷೇಪಾರ್ಹ ಪದ ಬಳಸಿ, ನಿಮ್ಮನ್ನು ನಾನು ಹಾಗೆ ಕರೆಯೋಕೆ ಆಗುತ್ತಾ ಎಂದರು. ಇದರಿಂದ ಕೈ ಸದಸ್ಯರ ಪಿತ್ತ ನೆತ್ತಿಗೇರಿತು. ನಿಮ್ಮ ಮನೆಯಲ್ಲೂ ಹೆಣ್ಣು ಮಕ್ಕಳು ಇಲ್ಲವೇ? ನಿಮ್ಮ ತಾಯಿನೂ ಓರ್ವ ಹೆಣ್ಣು? ಎಂದು ಲಕ್ಷ್ಮೀ ಹೆಬ್ಬಾಳ್ಕರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.


Spread the love

About Laxminews 24x7

Check Also

ಲಾಠಿ ಏಟಿನ ವಿರುದ್ಧ ಧಾರವಾಡ ಹೈಕೋರ್ಟ್‌ ಮೆಟ್ಟಿಲೇರಿದ ಜಯಮೃತ್ಯುಂಜಯ ಸ್ವಾಮೀಜಿ…ಸರ್ಕಾರ, ಗೃಹ ಇಲಾಖೆ, ಪೊಲೀಸ್‌ ಇಲಾಖೆಗೆ ನೋಟಿಸ್ ಜಾರಿಯಾಗಿದೆ- ಜಯ ಮೃತ್ಯುಂಜಯ ಶ್ರೀ

Spread the loveಲಾಠಿ ಏಟಿನ ವಿರುದ್ಧ ಧಾರವಾಡ ಹೈಕೋರ್ಟ್‌ ಮೆಟ್ಟಿಲೇರಿದ ಜಯಮೃತ್ಯುಂಜಯ ಸ್ವಾಮೀಜಿ…ಸರ್ಕಾರ, ಗೃಹ ಇಲಾಖೆ, ಪೊಲೀಸ್‌ ಇಲಾಖೆಗೆ ನೋಟಿಸ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ