Breaking News

ಅಂಬೇಡ್ಕರ್​ ಬಗ್ಗೆ ಅಮಿತ್ ಶಾ ಹೇಳಿಕೆ: ರಾಜ್ಯ ಕಾಂಗ್ರೆಸ್​ ನಾಯಕರ ಆಕ್ರೋಶ

Spread the love

ಬೆಳಗಾವಿ: “ಅಮಿತ್ ಶಾ ಅವರು ರಾಜ್ಯಸಭೆಯಲ್ಲಿ ನೀಡಿದ ಹೇಳಿಕೆ ಖಂಡನೀಯ. ಇಡೀ ವಿಶ್ವ ಅಂಬೇಡ್ಕರ್ ಬಗ್ಗೆ ಪ್ರಶಂಸೆಯಿಂದ ಮಾತನಾಡುತ್ತದೆ. ಪ್ರಜಾಪ್ರಭುತ್ವಕ್ಕೆ ಸಂವಿಧಾನ ಕೊಡುವ ಮೂಲಕ ದೇಶವನ್ನು ಒಗ್ಗೂಡಿಸಿದವರು ಅಂಬೇಡ್ಕರ್​. ಅವರ ಬಗ್ಗೆ ಲಘುವಾಗಿ ಮಾತನಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕ್ಷಮೆ ಕೇಳಬೇಕು. ಹಾಗೂ ಅಮಿತ್ ಶಾ ಅವರು ಅಂಬೇಡ್ಕರ್ ಅವರ ಬಗ್ಗೆ ಇನ್ನೂ ಹೆಚ್ಚು ತಿಳಿದುಕೊಳ್ಳಬೇಕು” ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು.

G Parameshwar, B.K. Hariprasad And D K Shivakumar

ಸುವರ್ಣಸೌಧದಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ ಅವರು, ಅಂಬೇಡ್ಕರ್ ಬಗ್ಗೆ ಕೇಂದ್ರ ಗೃಹಸಚಿವ ಅಮಿತ್ ಶಾ ಅವಹೇಳನಕಾರಿ ಹೇಳಿಕೆ ಆರೋಪ ವಿಚಾರವಾಗಿ ಮಾತನಾಡಿ, “ನಾನು ಇದನ್ನು ಖಂಡಿಸುತ್ತೇನೆ. ಇದು ಅಂಬೇಡ್ಕರ್ ಅವರ ವ್ಯಕ್ತಿತ್ವದ ಪ್ರಶ್ನೆ. ಅಂಬೇಡ್ಕರ್ ಅವರು ಗಾಂಧೀಜಿಯವರ ಜೊತೆಗೂ ಭಿನ್ನಾಭಿಪ್ರಾಯ ಇಟ್ಟುಕೊಂಡಿದ್ದರು. ಆದರೆ, ಇವರು ಅಂಬೇಡ್ಕರ್​ ಅವರ ವ್ಯಕ್ತಿತ್ವದ ಬಗ್ಗೆ ಮಾತಾಡಿದ್ದು, ನಮಗೆ ನೋವಾಗಿದೆ. ಹೀಗೆ ಅವಹೇಳನಕಾರಿಯಾಗಿ ಮಾತನಾಡುವುದು ಸರಿಯಲ್ಲ. ಅಂಬೇಡ್ಕರ್ ಕೂಡಾ ನಮಗೆ ದೇವರೇ. ಅವರನ್ನು ಪೂಜ್ಯ ಭಾವನೆಯಿಂದ ನೋಡುವ ಕೋಟ್ಯಂತರ ಜನ ಇದ್ದಾರೆ. ಅಮೆರಿಕ, ಯು.ಕೆಯಲ್ಲಿ ಅವರ ಪ್ರತಿಮೆ ಇಟ್ಟಿದಾರೆ” ಎಂದು ಅಮಿತ್ ಶಾ ಅವರಿಗೆ ಕಿವಿಮಾತು ಹೇಳಿದರು.


Spread the love

About Laxminews 24x7

Check Also

ಮನುಷ್ಯನ ಬದುಕೇ ಹಲವು ತಿರುವುಗಳು, ಏರುಪೇರುಗಳ ಪ್ರಯಾಣ

Spread the loveಕೊಪ್ಪಳ: ಮನುಷ್ಯನ ಬದುಕೇ ಹಲವು ತಿರುವುಗಳು, ಏರುಪೇರುಗಳ ಪ್ರಯಾಣ. ಕೆಲವೊಮ್ಮೆ ಆ ಏರುಪೇರುಗಳು, ತಿರುವುಗಳು ಜೀವನವನ್ನೇ ಬದಲಾಯಿಸಬಹುದು. ಹೀಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ