Breaking News

ಅವಾಚ್ಯ ಪದ ಬಳಕೆ ಮಾಡಿದ ಯಾವುದೇ ರೆಕಾರ್ಡ್ ಲಭ್ಯವಾಗಿಲ್ಲ: ಸಭಾಪತಿ ಹೊರಟ್ಟಿ

Spread the love

ಹುಬ್ಬಳ್ಳಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ವಿರುದ್ಧ ಬಿಜೆಪಿ ಎಂಎಲ್​ಸಿ ಸಿ.ಟಿ.ರವಿ ಅವರು ಮಾತನಾಡಿದ್ದಾರೆ ಎನ್ನಲಾದ ಯಾವುದೇ ಅವಾಚ್ಯ ಪದ ಬಳಕೆ ರೆಕಾರ್ಡ್​ ಇಲ್ಲ. ಆದರೆ, ಆಕ್ಷೇಪಾರ್ಹ ಪದ ಬಳಸಿದ್ದಾರೆಂದು ನಾಲ್ವರು ಸಾಕ್ಷಿ ಹೇಳಿದ್ದಾರೆ ಎಂದು ವಿಧಾನ ಪರಿಷತ್​​ ಸಭಾಪತಿ ಬಸವರಾಜ ಹೊರಟ್ಟಿ ತಿಳಿಸಿದರು.

ನಗರದಲ್ಲಿಂದು ತಮ್ಮ ನಿವಾಸದಲ್ಲಿ ಮಾಧ್ಯಮಗಳಿಗೆ ಮಾಹಿತಿ ನೀಡಿದ ಅವರು, ಆಡಿಯೋ ರೆಕಾರ್ಡ್​ ಆಗಿಲ್ಲ. ಸಾಕ್ಷಿಗಳು ಮಾತ್ರ ಇವೆ. ರೆಕಾರ್ಡ್​ ಹುಡುಕಿದ್ದೇನೆ. ನಮಗೆ ಆಡಿಯೋ ಸಿಕ್ಕಿಲ್ಲ. ನಾಲ್ಕು ಜನರು ಸಾಕ್ಷಿ ಹೇಳಿದ್ದಾರೆ. ಸಿಟಿ ರವಿ ಮತ್ತು ಲಕ್ಷ್ಮೀ ಹೆಬ್ಬಾಳ್ಕರ್​ ಇಬ್ಬರ ದೂರನ್ನೂ ಪಡೆದಿದ್ದೇವೆ ಎಂದು ತಿಳಿಸಿದರು.

ಸದನದಲ್ಲಿ ಪ್ರಶ್ನೋತ್ತರ ವೇಳೆ ಮುಗಿದ ಬಳಿಕ, ಕಾಂಗ್ರೆಸ್​ನವರು ಕೇಂದ್ರ ಸಚಿವ ಅಮಿತ್ ಶಾ ಅವರ ವಿರುದ್ದ ಪ್ರತಿಭಟನೆಗೆ ಮುಂದಾದರು. ಈ ವೇಳೆ ಗಲಾಟೆ ಆಯ್ತು. ಗಲಾಟೆ ಹಿನ್ನೆಲೆ ಕಲಾಪ ಮುಂದೂಡಿದೆ. ಆಗ ಇದೆಲ್ಲ ಗಲಾಟೆ ಆಗಿದೆ. ಸಂಜೆ 6 ಗಂಟೆಗೆ ಸಿಟಿ ರವಿ ಬಂಧನವಾಗಿರುವ ಬಗ್ಗೆ ಮಾಹಿತಿ ಬಂದಿದೆ ಎಂದು ಹೊರಟ್ಟಿ ತಿಳಿಸಿದರು.

ನಾನು ಲಕ್ಷ್ಮೀ ಹೆಬ್ಬಾಳ್ಕರ್​ ಹಾಗೂ ಸಿಟಿ ರವಿ ಅವರನ್ನು ಕರೆದು ಮಾತನಾಡಿದೆ‌. ಇದನ್ನು ಇಲ್ಲಿಗೆ ಮುಗಿಸೋಣ ಅಂತ ಸಲಹೆ ಕೂಡ ನೀಡಿದೆ. ನಾನು ಹತಾಶರಾಗಿದ್ದಾರೆ ಎಂದಿದ್ದೇನೆ. ಅದನ್ನು ತಪ್ಪಾಗಿ ಅರ್ಥ ಮಾಡಿಕೊಳ್ಳಲಾಗಿದೆ ಅಂತ ಸಿಟಿ ರವಿ ಅವರು ಹೇಳಿದ್ದಾರೆ. ಈ ರೀತಿ ಆಗಿರುವುದು ಮೊದಲ ಸಲ. 45 ವರ್ಷಗಳ ರಾಜಕೀಯ ಇತಿಹಾಸದಲ್ಲಿ ಇಂತಹ ಘಟನೆ ಆಗಿರಲಿಲ್ಲ. ಒಂದೊಂದು ಸಲ ಯಾಕಾದರೂ ಅಲ್ಲಿ ಕೂತಿದ್ದೇನೆ ಅನಿಸುತ್ತೆ ಎಂದು ಹೊರಟ್ಟಿ ಅಸಮಾಧಾನ ಹೊರಹಾಕಿದರು.


Spread the love

About Laxminews 24x7

Check Also

ಗುಲ್ಬರ್ಗಾ ವಿವಿ ಅತಿ ಹಿಂದುಳಿದ ವಿಶ್ವವಿದ್ಯಾಲಯ ಆಗಿದೆ : ಮಲ್ಲಿಕಾರ್ಜುನ್​ ಖರ್ಗೆ

Spread the loveಕಲಬುರಗಿ : ಜಿಲ್ಲೆಯಲ್ಲಿ ಜಯದೇವ ಆಸ್ಪತ್ರೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ಕಲಬುರಗಿ ಬೆಂಗಳೂರಿನಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ