Breaking News

ಸಿ.ಟಿ.ರವಿ ಬಂಧನ ಖಂಡಿಸಿ ಬಿಜೆಪಿ ನಾಯಕರ ಪ್ರತಿಭಟನೆ

Spread the love

ಬೆಂಗಳೂರು: ವಿಧಾನಪರಿಷತ್ ಕಲಾಪದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅವಾಚ್ಯ ಪದ ಬಳಸಿ ನಿಂದಿಸಿದ ಆರೋಪದಡಿ ಬಿಜೆಪಿ ನಾಯಕ ಸಿ.ಟಿ. ರವಿ ಅವರ ಬಂಧನ ಖಂಡಿಸಿ ನಗರದ ಫ್ರೀಡಂ ಪಾರ್ಕ್‌ನಲ್ಲಿ ಬಿಜೆಪಿ ನಾಯಕರು ಪ್ರತಿಭಟನೆ ನಡೆಸಿದರು.

ಮೇಲ್ಮನೆ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಶಾಸಕರಾದ ಭೈರತಿ ಬಸವರಾಜ್, ಅಶ್ವತ್ಥನಾರಾಯಣ, ಹರೀಶ್ ಪೂಂಜಾ, ಧೀರಜ್ ಮುನಿರಾಜ್, ಮಾಜಿ ಉಪ ಮೇಯರ್ ಹರೀಶ್ ಸೇರಿದಂತೆ ಹಲವು ಬಿಜೆಪಿ ಶಾಸಕರು, ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.

ಈ ಸಂದರ್ಭದಲ್ಲಿ ಮಾತನಾಡಿದ ಛಲವಾದಿ ನಾರಾಯಣಸ್ವಾಮಿ, “ಸಿ.ಟಿ.ರವಿಯವರು ಏನು ಮಾತನಾಡಿಲ್ಲ ಎಂದು ಸಭಾಪತಿಗಳೇ ಹೇಳಿದ್ದಾರೆ. ಸದನದ ಒಳಗೆ ನಡೆದಿರುವುದಕ್ಕೆ ಸಭಾನಾಯಕರೇ ತೀರ್ಮಾನ ತೆಗೆದು ಕೊಳ್ಳಬೇಕು. ಆದರೆ, ಸಭಾನಾಯಕರ ಅನುಮತಿಯಿಲ್ಲದೆ, ಪೊಲೀಸರು ಸಿ.ಟಿ.ರವಿ ಅವರನ್ನು ಬಂಧಿಸಿದ್ದಾರೆ. ಮೂಲಕ ಕಾಂಗ್ರೆಸ್ ಸರ್ಕಾರ ಪೊಲೀಸ್ ಇಲಾಖೆಯನ್ನು ದುರ್ಬಳಕೆ ಮಾಡಿಕೊಂಡಿದೆ” ಎಂದು ಆರೋಪಿಸಿದರು.

ರಾಜ್ಯದಲ್ಲಿ ನಾಲಾಯಕ್ ಸರ್ಕಾರ ಇದೆ: ಪಕ್ಷದ ನಾಯಕ ಸಿ.ಟಿ.ರವಿ ಅವರನ್ನು ಏಕಾಏಕಿ ಬಂಧಿಸಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಶಾಸಕ ಅಶ್ವತ್ಥನಾರಾಯಣ, ”ಆರೋಪದ ಕುರಿತು ವಿಧಾಮ ಪರಿಷತ್ತಿನಲ್ಲಿ ಸಭಾಪತಿಗಳೇ ಸ್ಪಷ್ಟನೆ ಕೊಟ್ಟಿದ್ದಾರೆ. ಆದರೂ ಕೂಡಾ ಕಾಂಗ್ರೆಸ್‌ನವರು ದ್ವೇಷದ ಹಿನ್ನೆಲೆಯಲ್ಲಿ ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದಾರೆ. ದೂರು ಪಡೆದ ಮೇಲೆ ತನಿಖೆ ಮಾಡಬೇಕಿತ್ತು. ಅಲ್ಲದೇ ಸಿ.ಟಿ.ರವಿಯವರು ಕೊಟ್ಟ ಪ್ರತಿದೂರನ್ನು ಪರಿಗಣಿಸಿಲ್ಲ. ಕೇವಲ ಪೋಸ್ಟಿಂಗ್​ಗಾಗಿ ಪೊಲೀಸರು ಕೆಲಸ ಮಾಡುತ್ತಿದ್ದಾರೆ. ರಾಜ್ಯದಲ್ಲಿ ನಾಲಾಯಕ್ ಸರ್ಕಾರ ಇದೆ. ಸುವರ್ಣಸೌಧದಲ್ಲಿ ರೌಡಿಗಳು ಬಂದು ಸಿ.ಟಿ.ರವಿಯವರ ಮೇಲೆ ಹಲ್ಲೆ ಮಾಡಿದ್ದಾರೆ ಎಂದರೆ ಸುವರ್ಣಸೌಧಕ್ಕೆ ಭದ್ರತೆ ಕೊಡುವ ಯೋಗ್ಯತೆ ಕಾಂಗ್ರೆಸ್‌ನವರಿಗಿಲ್ಲ, ಇನ್ನು ಇಡೀ ರಾಜ್ಯಕ್ಕೆ ಭದ್ರತೆ ಹೇಗೆ ಕೊಡುತ್ತಾರೆ” ಎಂದು ಪ್ರಶ್ನಿಸಿದರು.


Spread the love

About Laxminews 24x7

Check Also

ಲಂಚದ ಹಣ ನುಂಗಿ ಭಂಡತನ ಮೆರೆದೆ ಅಧಿಕಾರಿ,ವಾಂತಿ ಮಾಡಿಸಿ ಕಕ್ಕಿಸಿದ ಲೋಕಾಯುಕ್ತ ಪೊಲೀಸ್​

Spread the loveಕೊಪ್ಪಳ, : ಕೊಪ್ಪಳ ಜಿಲ್ಲಾ ಸಹಕಾರಿ ಸಂಘಗಳ ಉಪ ನಿಬಂಧಕ ಇಂದು ಸಂಜೆ ಕೊಪ್ಪಳ ಲೋಕಾಯುಕ್ತ (Lokayukta) ಪೊಲೀಸರ ಬಲೆಗೆ ಬಿದ್ದಿರುವಂತಹ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ