Breaking News

ಸಿ.ಟಿ.ರವಿ ಅವರನ್ನು ತಕ್ಷಣವೇ ಬಿಡುಗಡೆ ಮಾಡುವಂತೆ ಹೈಕೋರ್ಟ್ ಆದೇಶ

Spread the love

ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅವಾಚ್ಯ ಪದ ಬಳಕೆ ಆರೋಪದ ಸಂಬಂಧ ದಾಖಲಾಗಿರುವ ಪ್ರಕರಣದಲ್ಲಿ ಬಂಧಿಸಲ್ಪಟ್ಟಿರುವ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರನ್ನು ತಕ್ಷಣವೇ ಬಿಡುಗಡೆ ಮಾಡುವಂತೆ ಹೈಕೋರ್ಟ್ ಇಂದು ಆದೇಶಿಸಿದೆ.

ಜಾಮೀನು ಕೋರಿ ಸಿ.ಟಿ.ರವಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ಜಿ.ಉಮಾ ಅವರಿದ್ದ ಪೀಠ ಈ ಆದೇಶ ಮಾಡಿತು.

ಇದೇ ವೇಳೆ, ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯದಲ್ಲೂ ಪ್ರಕರಣದ ವಿಚಾರಣೆ ನಡೆಯಿತು. ಸಿ.ಟಿ.ರವಿ ಪರ ವಾದ ಮಂಡಿಸಿದ ಹಿರಿಯ ವಕೀಲ ಅಶೋಕ್ ಹಾರನಹಳ್ಳಿ, ”ಬಂಧನದ ಕಾರಣದ ಕುರಿತು ಕಕ್ಷಿದಾರರಿಗೆ, ಕುಟುಂಬ ಸದಸ್ಯರಿಗೆ ಯಾವುದೇ ಮಾಹಿತಿ ನೀಡಿಲ್ಲ. ಅಲ್ಲದೇ ದೂರುದಾರರು ಓರ್ವ ಸಚಿವೆಯಾಗಿದ್ದಾರೆ, ಅವರಿಗೆ ಬೆದರಿಕೆ ಹಾಕಲು ಸಾಧ್ಯವೇ? ದೂರುದಾರರ ಬೆಂಬಲಿಗರೇ ತಮ್ಮ ಕಕ್ಷಿದಾರರ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ” ಎಂದರು.

“ಅಲ್ಲದೆ ಕಕ್ಷಿದಾರರು ಪ್ರಕರಣದ ಸಾಕ್ಷಿನಾಶ ಮಾಡಬಹುದೆಂದು ಹೇಳಿದ್ದಾರೆ. ಆದರೆ ಸಾಕ್ಷಿಗಳೆಲ್ಲಾ ಆಡಳಿತ ಪಕ್ಷದವರೇ ಆಗಿರುವಾಗ ಸಾಕ್ಷಿ ನಾಶ ಹೇಗೆ ಸಾಧ್ಯ? ಸದನದ ವಸ್ತುಗಳನ್ನು ಹಾನಿ ಮಾಡಿದರೆ ಅದನ್ನು ಪ್ರಶ್ನಿಸಬಹುದೇ ವಿನಹ ಸದನದ ಮಾತುಗಳಿಗೆ ಪ್ರಕರಣ ದಾಖಲಿಸುವ ಅವಕಾಶ ನೀಡಿದರೆ ಸದಸ್ಯರು ಸ್ವತಂತ್ರವಾಗಿ ಮಾತನಾಡ ಅವಕಾಶ ಕಳೆದುಕೊಳ್ಳುತ್ತಾರೆ. ಒಬ್ಬರಿಗೊಬ್ಬರ ವಿರುದ್ಧ ಪ್ರಕರಣ ದಾಖಲು ಮಾಡುತ್ತಾ ಹೋಗುತ್ತಾರೆ. ಆದ್ದರಿಂದ ಪ್ರಕರಣದಲ್ಲಿ ಸಿ.ಟಿ.ರವಿ ಅವರಿಗೆ ಮಧ್ಯಂತರ ಜಾಮೀನು ನೀಡಬೇಕು” ಎಂದು ಮನವಿ ಮಾಡಿದರು.

ಇದಕ್ಕೆ ಪ್ರತಿಯಾಗಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪರ ವಾದ ಮಂಡಿಸಿದ ಹಿರಿಯ ವಕೀಲ ಎಂ.ಎಸ್.ಶ್ಯಾಮ್ ಸುಂದರ್, ”ಆರೋಪಿ ಅಸಾಂವಿಧಾನಿಕ ಪದ ಬಳಕೆ ಮಾಡಿ ಸುಮಾರು ಬಾರಿ ದೂರುದಾರರನ್ನು ಕರೆದಿದ್ದಾರೆ. ಓರ್ವ ಶಾಸಕ ಮಹಿಳೆಯನ್ನು ಹಾಗೆ ಕರೆದಿದ್ದಾರೆ” ಎಂದು ಸೀತಾ ಸೊರೇನ್ ಪ್ರಕರಣ ಉಲ್ಲೇಖಿಸಿ ವಾದ ಮಂಡಿಸಿದರು.

ವಾದ-ಪ್ರತಿವಾದ ಆಲಿಸಿದ ಜನಪ್ರತಿನಿಧಿಗಳ ನ್ಯಾಯಾಲಯ ಮಧ್ಯಂತರ ಜಾಮೀನು ಅರ್ಜಿಯ ವಿಚಾರಣೆಯನ್ನು ಶನಿವಾರಕ್ಕೆ ಮುಂದೂಡಿತು.

ಇದಕ್ಕೂ ಮುನ್ನ ಬೆಳಗಾವಿಯಲ್ಲಿ ಜೆಎಂಎಫ್​ಸಿ ನ್ಯಾಯಾಲಯಕ್ಕೆ ಸಿ.ಟಿ.ರವಿ ಅವರನ್ನು ಪೊಲೀಸರು ಹಾಜರುಪಡಿಸಿದ್ದರು. ಈ ವೇಳೆ ಕೋರ್ಟ್, ಆದೇಶವನ್ನು ಮಧ್ಯಾಹ್ನಕ್ಕೆ ಕಾಯ್ದಿರಿಸಿತ್ತು. ಬಳಿಕ ಮಧ್ಯಾಹ್ನ ವಿಚಾರಣೆ ನಡೆಸಿ, ಪ್ರಕರಣವನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್​ಗೆ ವರ್ಗಾಯಿಸಿ ಆದೇಶ ಹೊರಡಿಸಿತ್ತು


Spread the love

About Laxminews 24x7

Check Also

ಸಿಎಂ ಹುದ್ದೆಯ ರೇಸಿನಿಂದ ಹಿಂದೆ ಸರಿದವರು

Spread the love ಕಳೆದ ವಾರ ವಿದಾನಮಂಡಲ ಅಧಿವೇಶನ ನಡೆಯುತ್ತಿದ್ದ ಸಂದರ್ಭದಲ್ಲಿ ಕುತೂಹಲಕಾರಿ ವಿಷಯವೊಂದು ಹೊರಬಿತ್ತು.ಅದರ ಪ್ರಕಾರ ಕರ್ನಾಟಕದಲ್ಲಿ ಮತ್ತೊಮ್ಮೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ