Breaking News

ಗೃಹ ಸಚಿವ ಅಮೀತ್ ಶಾಹ್ ರಾಜೀನಾಮೆ ಪಡೆಯಿರಿ… ಬೆಳಗಾವಿಯಲ್ಲಿ ಎಸ್.ಡಿ.ಪಿ.ಐ ಪ್ರತಿಭಟನೆ

Spread the love

ಗೃಹ ಸಚಿವ ಅಮೀತ್ ಶಾಹ್ ರಾಜೀನಾಮೆ ಪಡೆಯಿರಿ…
ಬೆಳಗಾವಿಯಲ್ಲಿ ಎಸ್.ಡಿ.ಪಿ.ಐ ಪ್ರತಿಭಟನೆ

ಸಂಸತ್ತಿನಲ್ಲಿ ಗೃಹ ಸಚಿವ ಅಮೀತ್ ಶಾಹ ಸಂವಿಧಾನ ಶಿಲ್ಪಿ ಡಾ.ಬಾಬಾಸಾಹೇಬ್ ಅಂಬೇಡ್ಕರರ ವಿರುದ್ಧ ಹಗುರವಾಗಿ ಮಾತನಾಡಿದ್ದಾರೆಂದು ಆರೋಪಿಸಿ ಅವರ ರಾಜೀನಾಮೆ ಪಡೆಯಬೇಕೆಂದು ಒತ್ತಾಯಿಸಿ ಇಂದು ಬೆಳಗಾವಿಯಲ್ಲಿ ಎಸ್.ಡಿ.ಪಿ.ಐ ಪ್ರತಿಭಟನೆಯನ್ನು ನಡೆಸಿತು.

ಬೆಳಗಾವಿಯ ಜಿಲ್ಲಾಧಿಕಾರಿಗಳ ಕಾರ್ಯಾಲಯದ ಆವರಣದಲ್ಲಿ ಎಸ್.ಡಿ.ಪಿ.ಐ ಸಂಘಟನೆಯ ವತಿಯಿಂದ ಅಂಬೇಡ್ಕರರ ವಿರುದ್ಧ ಅವಹೇಳನ ಮಾಡಿದ್ದಾರೆಂದು ಆರೋಪಿಸಿ ಎಸ್.ಡಿ.ಪಿ.ಐ ವತಿಯಿಂದ ಪ್ರತಿಭಟನೆಯನ್ನು ನಡೆಸಲಾಯಿತು.

ಸಂಸತ್ತಿನಲ್ಲಿ ಸಂವಿಧಾನ ಶಿಲ್ಪಿ ಡಾ.ಬಾಬಾಸಾಹೇಬ್ ಅಂಬೇಡ್ಕರರ ವಿರುದ್ಧ ಗೃಹ ಸಚಿವ ಅಮೀತ್ ಶಾಹ್ ನೀಡಿರುವ ಹೇಳಿಕೆ ಖಂಡನೀಯ. ಕೂಡಲೇ ಅಮೀತ್ ಶಾಹ್ ಕ್ಷಮೆಯನ್ನು ಕೇಳಬೇಕು. ಬಿಜೆಪಿಗರು ಮೊದಲಿನಿಂದಲೂ ದಲಿತ ಮೇಲೆ ದೌರ್ಜನ್ಯ ಮಾಡುತ್ತಾ ಬಂದಿದ್ದಾರೆ. ಯಾವುದೇ ದಲಿತರಿಗೆ ದೇವಸ್ಥಾನದ ಪ್ರವೇಶ ಇಲ್ಲಿಯವರೆಗೂ ನೀಡಿಲ್ಲ. ವನ್ ನೇಷನ್, ವನ್ ಎಲೆಕ್ಷನ್ ಜಾರಿಗೊಳಿಸುತ್ತಿದ್ದಂತೆ ಬಿಜೆಪಿ ದಲಿತರನ್ನು ಅವಮಾನಿಸುವ ಹುನ್ನಾರವನ್ನು ಆರಂಭಗೊಳಿಸಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಈ ವೇಳೆ ಎಸ್.ಡಿ.ಪಿ.ಐ ಸಂಘಟನೆಯ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗಿದ್ಧರು.


Spread the love

About Laxminews 24x7

Check Also

ಶಿಕ್ಷಿಸುವುದಕ್ಕಿಂತ ಸರಿಯಾದ ದಾರಿಗೆ ತರೋದೇ ನಮ್ಮ ಧರ್ಮ: ನಿಂದಿಸಿದ ಮಕ್ಕಳನ್ನು ಕ್ಷಮಿಸಿದ ಮೋದಿ

Spread the loveನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಘಟನೆ ಮತ್ತು ತಮ್ಮ ಹಾಗೂ ತಮ್ಮ ದಿವಂಗತ ತಾಯಿಯವರ ವಿರುದ್ಧ ವ್ಯಕ್ತವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ