ಖಾನಾಪುರ ಪಟ್ಟಣದಲ್ಲಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಸಂಯೋಜಕ ಸಂಘಟನೆ ತಾಲೂಕ ಘಟಕ ಹಾಗೂ ತಾಲೂಕಿನ ವಿವಿಧ ದಲಿತ ಸಂಘಟನೆಗಳ ಸಹಯೋಗದೊಂದಿಗೆ ಕೇಂದ್ರ ಸಚಿವ ಅಮಿತ್ ಶಾ ವಿರುದ್ಧ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಸಂಸತ್ತಿನಲ್ಲಿ ಕೇಂದ್ರ ಸಚಿವರಾದ ಅಮಿತ್ ಶಾಹ್ ಅವರು ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ಕೇಂದ್ರ ಸಚಿವ ಅಮಿತ್ ಶಾಹ ಅವರು ಈ ಕೂಡಲೇ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಉದ್ಯಾನವನದಿಂದ ತಹಶೀಲ್ದಾರ್ ಕಚೇರಿವರೆಗೂ ಅಣಕು ಶವಯಾತ್ರೆ ನಡೆಸಲಾಯಿತು.
ನೂರಾರು ಕಾರ್ಯಕರ್ತರೊಂದಿಗೆ ತಹಶೀಲ್ದಾರ್ ಮುಖಾಂತರ ರಾಷ್ಟ್ರಪತಿಗಳಿಗೆ ಮನವಿಯನ್ನು ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಕೆ ಆರ್ ಡಿಎಸ್ಎಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ರಾಜಶೇಖರ್ ಹಿಂಡಲಗಿ, ತಾಲೂಕ ಅಧ್ಯಕ್ಷರಾದ ರಾಘವೇಂದ್ರ ಚಲವಾದಿ, ಡಿಎಸ್ಎಸ್ ಅಂಬೇಡ್ಕರ್ ವಾದ ಸಂಘಟನೆ ತಾಲೂಕ ಅಧ್ಯಕ್ಷರಾದ ಶಿವಾಜಿ ಮಾದರ್, ಡಿಎಸ್ಎಸ್ ಭೀಮವಾದ ತಾಲೂಕ ಅಧ್ಯಕ್ಷರಾದ ಉಮೇಶ್ ಕೋಲ್ಕಾರ್ , ದುರ್ಗಪ್ಪ ಚಲವಾದಿ , ಮಲ್ಲೇಶ್ ಪೋಳ, ಸುರೇಶ್ ಶಿಂಗೆ, ಲಕ್ಷ್ಮಣ್ ಮದರ್, ನಾಗೇಶ್ ಕಾಂಬ್ಳೆ, ರಾಮ ಮಾದರ್, ಸಂಗೀತ ಕದಮ್, ಪರಶುರಾಮ್ ಮಾದಾರ್, ಶರತ್ ಹೊನ್ನನಾಯಕ್ ಹಾಗೂ ತಾಲೂಕಿನ ವಿವಿಧ ದಲಿತ ಸಂಘಟನೆಗಳ ಕಾರ್ಯಕರ್ತರು ಉಪಸ್ಥಿತರಿದ್ದರು