Breaking News

ಶಿಕ್ಷಣ ವ್ಯವಸ್ಥೆಯಲ್ಲಿ ನಾವು ಮಕ್ಕಳಿಗೆ 3-ಎಚ್ ಸೂತ್ರವನ್ನು ಅಳವಡಿಸಿಕೊಳ್ಳಬೇಕಾಗಿದೆ ಎಂದು ಸಿಎಂ ಸಿದ್ದರಾಮಯ್ಯ

Spread the love

ಸಂಕಷ್ಟದಲ್ಲಿರುವ ಭಾಷೆಗಳಲ್ಲಿ ಕನ್ನಡವೂ ಒಂದೆಂದು ವಿದ್ವಾಂಸರು ಹೇಳುತ್ತಾರೆ. ಇದಕ್ಕೆ ಕಾರಣಗಳೇನು ಎಂಬುದನ್ನು ಕಂಡುಕೊಳ್ಳಬೇಕಾಗಿದೆ. ನನಗೆ ತಿಳಿದ ಮಟ್ಟಿಗೆ ನಮ್ಮ ಶಿಕ್ಷಣ ವ್ಯವಸ್ಥೆಯಲ್ಲಿ ಕೆಲವು ಸಮಸ್ಯೆಗಳಿವೆ. ಶಿಕ್ಷಣ ವ್ಯವಸ್ಥೆಯಲ್ಲಿ ನಾವು ಮಕ್ಕಳಿಗೆ 3-ಎಚ್ ಸೂತ್ರವನ್ನು ಅಳವಡಿಸಿಕೊಳ್ಳಬೇಕಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಅಖಿಲ ಭಾರತ 87ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಸಿಎಂ ಸಿದ್ದರಾಮಯ್ಯ ಅವರು ಉದ್ಘಾಟನೆ ಮಾಡಿದ್ದಾರೆ. ಮಂಡ್ಯದಲ್ಲಿ ಅದ್ಧೂರಿಯಾಗಿ ನಡೆಯುತ್ತಿರುವ 87ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅಧಿಕೃತವಾಗಿ ಚಾಲನೆ ದೊರೆಯಿತು. ರಾಷ್ಟ್ರ ಧ್ವಜವನ್ನು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಚಲುವರಾಯಸ್ವಾಮಿ, ಕನ್ನಡ ಸಾಹಿತ್ಯ ಪರಿಷತ್ತು ಧ್ವಜವನ್ನು ಕ.ಸಾ.ಪ ರಾಜ್ಯಾಧ್ಯಕ್ಷ ನಾಡೋಜ ಡಾ.ಮಹೇಶ್ ಜೋಷಿ ಅವರು, ನಾಡ ಧ್ವಜವನ್ನು ಪರಿಷತ್ತಿನ ಜಿಲ್ಲಾ ಸಂಚಾಲಕಿ ಡಾ. ಮೀರಾ ಶಿವಲಿಂಗಯ್ಯ ಅವರು ಧ್ವಜಾರೋಹಣ ಮಾಡಿದರು.‌
ಸಮ್ಮೇಳನವನ್ನು ಉದ್ಘಾಟನೆ ಮಾಡಿದ ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಮೂರು ದಶಕಗಳ ಹಿಂದೆ ಸಾಹಿತಿ ಚದುರಂಗ ಅವರ ಅಧ್ಯಕ್ಷತೆಯಲ್ಲಿ 63ನೇ ಸಾಹಿತ್ಯ ಸಮ್ಮೇಳನ ಮಂಡ್ಯದಲ್ಲಿ ನಡೆದಿತ್ತು.

ಆಗ ಕನ್ನಡ ಸಾಹಿತ್ಯ ಪರಿಷತ್ನ ರಾಜ್ಯಾಧ್ಯಕ್ಷ ಆಗಿದ್ದ ಡಾ.ಗೊ.ರು ಚನ್ನಬಸಪ್ಪನವರು ಸಮ್ಮೇಳನವನ್ನು ಯಶಸ್ವಿಯಾಗಿ ನಿರ್ವಹಿಸಿದ್ದರು. 30 ವರ್ಷಗಳ ನಂತರ ಈಗ ನಡೆಯುತ್ತಿರುವ 87ನೇ ಸಮ್ಮೇಳನದ ಅಧ್ಯಕ್ಷರು ಚನ್ನಬಸಪ್ಪನವರೇ ಆಗಿರುವುದು ಕನ್ನಡದ ಗೌರವವನ್ನು ಹೆಚ್ಚಿಸಿದೆ ಎಂದು ಸಿಎಂ ಹೇಳಿದ್ದಾರೆ. ಹೆಡ್, ಹಾರ್ಟ್ ಮತ್ತು ಹ್ಯಾಂಡ್ ಎಂದು ಕರೆಯಲಾಗುವ 3-ಹೆಚ್ ಸೂತ್ರಗಳು ಮೆದುಳು, ಕರುಣೆ ಮತ್ತು ಕೌಶಲ್ಯವು ಸೇರಿ ರೂಪುಗೊಂಡ ಶಿಕ್ಷಣ ವ್ಯವಸ್ಥೆ ನಮ್ಮದಾಗಬೇಕಾಗಿದೆ. ಬುದ್ಧ ಇದನ್ನು ಯಶಸ್ವಿಯಾಗಿ ಪ್ರಯೋಗಿಸಿದ್ದ. ಗಾಂಧೀಜಿಯವರೂ ಇದನ್ನೆ ಹೇಳಿದ್ದರು. ಈಗಿನ ಶಿಕ್ಷಣ ವ್ಯವಸ್ಥೆಯು ಹಳೆಯ ವೈದಿಕ ಶಿಕ್ಷಣ ವ್ಯವಸ್ಥೆಯಂತೆಯೆ ಬಾಯಿಪಾಠ ಮಾಡುವ ಉಪಯೋಗವಿಲ್ಲದ ವ್ಯವಸ್ಥೆಯಾಗಿದೆ. ಕನ್ನಡ ಉಳಿಯಬೇಕಾದರೆ ನಮ್ಮ ಶಿಕ್ಷಣ ವ್ಯವಸ್ಥೆಯನ್ನು ಆಮೂಲಾಗ್ರ ಬದಲಾಯಿಸಿ ಮಕ್ಕಳನ್ನು ಕನ್ನಡ ಶಾಲೆಗಳಿಗೆ ಸೆಳೆಯಬೇಕಾಗಿದೆ. ಹೀಗಾದಾಗ ಮಾತ್ರ ಕನ್ನಡದಲ್ಲಿ ಯೋಚಿಸುವ, ಸಂಶೋಧನೆ ಮಾಡುವ, ಉತ್ಪಾದನೆ ಮತ್ತು ಮಾರುಕಟ್ಟೆ ಮಾಡುವ ಭಾಷೆಯಾಗಿ ಕನ್ನಡವು ಬೆಳೆಯುತ್ತದೆ ಎಂದು ಭಾವಿಸುತ್ತಿರುವುದಾಗಿ ಹೇಳಿದರು.

 

ಇನ್ನು ಸಮ್ಮೇಳನದ ಅಧ್ಯಕ್ಷರಾದ ಗೊ.ರು.ಚನ್ನಬಸಪ್ಪ ಅವರು, ‘ತಂತ್ರಜ್ಞಾನದ ನೆರವು ಪಡೆದು ಕನ್ನಡವನ್ನು ಕಿರಿಯ ಪೀಳಿಗೆಯ ಎದೆಗೆ ಬೀಳುವ ಅಕ್ಷರವಾಗಿಸಬೇಕು. ‘ಹತ್ತನೇ ತರಗತಿವರೆಗೆ ಕನ್ನಡ ಮಾಧ್ಯಮವೇ ಕಡ್ಡಾಯವಾಗಬೇಕು. ಇಂಗ್ಲಿಷ್ ಮಾಧ್ಯಮದ ಶಾಲೆಗಳನ್ನು ಸರ್ಕಾರ ತೆರೆಯುವುದನ್ನಾಗಲಿ, ಖಾಸಗಿ ಶಾಲೆಗಳಿಗೆ ಅನುಮತಿ ಕೊಡುವುದನ್ನಾಗಲೀ ಕೂಡಲೇ ನಿಲ್ಲಿಸಬೇಕು’ ಎಂದು ಕರೆ ನೀಡಿದರು. ಬೈಟ್

ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ನಿರ್ಮಲಾನಂದನಾಥ ಸ್ವಾಮೀಜಿಗಳು ಸಾನಿಧ್ಯ ವಹಿಸಿದ್ದರು. ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಚಲುವರಾಯಸ್ವಾಮಿ, ಶಾಸಕರಾದ ರಮೇಶ್ ಬಂಡಿಸಿದ್ದೇಗೌಡ, ದಿನೇಶ್ ಗೂಳಿಗೌಡ, ಡಿಸಿ ಡಾ.ಕುಮಾರ್ ಸೇರಿದಂತೆ ಇನ್ನುಳಿದವರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಅಂಬೇಡ್ಕರರನ್ನು ಅವಮಾನಿಸಿದ ಶಾಹ ವಿರುದ್ಧ ಕ್ರಮ ಕೈಗೊಳ್ಳಿ ಖಾನಾಪುರದಲ್ಲಿ ದಲಿತ ಸಂಘರ್ಷ ಸಮಿತಿಯಿಂದ ಪ್ರತಿಭಟನೆ

Spread the love  ಖಾನಾಪುರ ಪಟ್ಟಣದಲ್ಲಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಸಂಯೋಜಕ ಸಂಘಟನೆ ತಾಲೂಕ ಘಟಕ ಹಾಗೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ