Breaking News

ಸಾರಿಗೆ ಇಲಾಖೆಗೆ ನೀಡಬೇಕಿರುವ 414 ಕೋಟಿ ರೂ. ಅನ್ನು ಸರ್ಕಾರ ಬಾಕಿ ಉಳಿಸಿಕೊಂಡಿದೆ.

Spread the love

ಹುಬ್ಬಳ್ಳಿ, ಡಿಸೆಂಬರ್​ 22: ಬಾಕಿ ಇರುವ 414 ಕೋಟಿ ರೂ. ಬಿಡುಗಡೆ ಮಾಡುವಂತೆ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ (NWKSRTC)ದ ವ್ಯವಸ್ಥಾಪಕ ನಿರ್ದೇಶಕಿ ಎಮ್​. ಪ್ರಿಯಾಂಗಾ ಅವರು ಆರ್ಥಿಕ ಇಲಾಖೆಗೆ ಪತ್ರ ಬರೆದಿದ್ದಾರೆ. ಈ ವಿಚಾರವಾಗಿ ಎಮ್​. ಪ್ರಿಯಾಂಗಾ ಮಾತನಾಡಿ, ನಾಲ್ಕು ವಿಭಾಗದ ನಿರ್ದೇಶಕ ಮಂಡಳಿಯಲ್ಲೂ ಈ ವಿಚಾರ ಚರ್ಚೆಯಾಗಿದೆ. ಹಣ ಬಿಡುಗಡೆ ಮಾಡುವಂತೆ ಆರ್ಥಿಕ ಇಲಾಖೆಗೆ ಪತ್ರ ಬರೆದಿದ್ದೇವೆ. ಹಣ ಬಿಡುಗಡೆ ‌ಮಾಡುತ್ತೇವೆ ಎಂದಿದ್ದಾರೆ ಎಂದು ತಿಳಿಸಿದರು.

ಸಾರಿಗೆ ಇಲಾಖೆಗೆ ನೀಡಬೇಕಿದ್ದ 414 ಕೋಟಿ ರೂ. ಬಾಕಿ ಉಳಿಸಿಕೊಂಡ ಸರ್ಕಾರ

ಎನ್​ಡಬ್ಲೂಕೆಎಸ್​ಆರ್​ಟಿಸಿಯಲ್ಲಿ ಒಂದು ದಿನಕ್ಕೆ ಸುಮಾರು 25 ಲಕ್ಷ ಜನ ಪ್ರಯಾಣ ಮಾಡುತ್ತಾರೆ. ಇದರಲ್ಲಿ ಸರಾಸರಿ 16 ಲಕ್ಷ ಜನ ಶಕ್ತಿ ಯೋಜನೆ ಫಲಾನುಭವಿಗಳು ಪ್ರಯಾಣ ಮಾಡುತ್ತಾರೆ. ಒಂದು ತಿಂಗಳಿಗೆ 120 ಕೋಟಿ ಶೂನ್ಯ ಟಿಕೆಟ್ ಪ್ರಯಾಣದ ದರವಾಗತ್ತೆ. ಈ‌ ಪೈಕಿ ಸರ್ಕಾರದಿಂದ 102 ಕೋಟಿ ಹಣ ವಾಪಸ್ ಬರುತ್ತಿದೆ. ಬಾಕಿ 414 ಕೋಟಿ ಹಣ ಬರಬೇಕಾಗಿದೆ. ಈ ವಿಚಾರ ಸರ್ಕಾರದ ಗಮನಕ್ಕೆ ತಂದಿದ್ದೇವೆ. ಆದಷ್ಟು ಬೇಗ ಹಣ ಬಿಡುಗಡೆ ಮಾಡುತ್ತೇವೆ ಅಂತ ಹೇಳಿದ್ದಾರೆ ಎಂದು ಹೇಳಿದರು.


Spread the love

About Laxminews 24x7

Check Also

ಭಾರತದ ಮುಂದಿನ ಸೇನಾ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಜನರಲ್ ಧೀರಜ್ ಸೇಠ್ ನೇಮಕ

Spread the loveನವದೆಹಲಿ: ಭಾರತದ ಮುಂದಿನ ಸೇನಾ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಜನರಲ್ ಧೀರಜ್ ಸೇಠ್  ಅವರನ್ನ ಕೇಂದ್ರ ಸರ್ಕಾರ ನೇಮಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ