Breaking News

ಸಿಲಿಕಾನ್​ ಸಿಟಿಯಲ್ಲಿ ಪಾನಮತ್ತ ವಾಹನ ಚಾಲಕರ ವಿರುದ್ಧ ಕಾರ್ಯಾಚರಣೆ ನಡೆಸಿರುವ ಪೊಲೀಸರು 769 ಪ್ರಕರಣ ದಾಖಲು ಮಾಡಿದ್ದಾರೆ.

Spread the love

ಬೆಂಗಳೂರು: ಪಾನಮತ್ತರಾಗಿ ವಾಹನ ಚಾಲನೆ ಮಾಡುವವರು ಹಾಗೂ ಅತಿವೇಗದ ಚಾಲನೆ ವಿರುದ್ಧ ಬೆಂಗಳೂರು ಸಂಚಾರ ಪೊಲೀಸರು ಕಳೆದ ಒಂದು ವಾರದಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿದ್ದಾರೆ. 60,903 ವಾಹನ ಚಾಲಕರನ್ನು ತಪಾಸಣೆ ನಡೆಸಿ ಒಟ್ಟೂ 769 ಪ್ರಕರಣಗಳನ್ನು ದಾಖಲಿಸಿದ್ದಾರೆ.

ಆರೋಪಿತ ಚಾಲಕರ ಡ್ರೈವಿಂಗ್ ಲೈಸೆನ್ಸ್ ರದ್ದುಗೊಳಿಸುವಂತೆ ಸಾರಿಗೆ ಇಲಾಖೆಗೆ ಪತ್ರ ಬರೆಯಲಾಗುವುದು. ಅದೇ ರೀತಿ ನಗರದಲ್ಲಿ ಅತಿ ವೇಗವಾಗಿ ವಾಹನ ಚಲಾಯಿಸುತ್ತಿದ್ದ 241 ವಾಹನ ಸವಾರರ ವಿರುದ್ಧ ಪ್ರಕರಣ ದಾಖಲಿಸಿಕೊಂಡು 2.41 ಲಕ್ಷ ರೂ ದಂಡ ಸಂಗ್ರಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಹೊಸ ವರ್ಷಾಚರಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ನಗರದಲ್ಲಿ ಪಾನಮತ್ತರಾಗಿ ವಾಹನ ಚಲಾಯಿಸುವವರು ಹಾಗೂ ಅತಿವೇಗದ ವಾಹನ ಚಾಲನೆಯ ವಿರುದ್ಧ ಕಾರ್ಯಾಚರಣೆ ಕೈಗೊಳ್ಳಲಾಗಿದೆ. ಮುಂದಿನ ದಿನಗಳಲ್ಲಿಯೂ ಸಂಚಾರ ಪೊಲೀಸ್ ಇಲಾಖೆಯಿಂದ ಕಾರ್ಯಾಚರಣೆ ಮುಂದುವರೆಯಲಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.


Spread the love

About Laxminews 24x7

Check Also

ಶಿಕ್ಷಿಸುವುದಕ್ಕಿಂತ ಸರಿಯಾದ ದಾರಿಗೆ ತರೋದೇ ನಮ್ಮ ಧರ್ಮ: ನಿಂದಿಸಿದ ಮಕ್ಕಳನ್ನು ಕ್ಷಮಿಸಿದ ಮೋದಿ

Spread the loveನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಘಟನೆ ಮತ್ತು ತಮ್ಮ ಹಾಗೂ ತಮ್ಮ ದಿವಂಗತ ತಾಯಿಯವರ ವಿರುದ್ಧ ವ್ಯಕ್ತವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ