Breaking News

ಬೆಳಗಾವಿ ಕಾಂಗ್ರೆಸ್ ಅಧಿವೇಶನಕ್ಕೆ ತಯಾರಿ..?

Spread the love

ಬೆಳಗಾವಿ: 39ನೇ ಕಾಂಗ್ರೆಸ್​​ ಅಧಿವೇಶನಕ್ಕೆ ಸಾಕ್ಷಿಯಾಗಿದ್ದ ಬೆಳಗಾವಿ ವೀರಸೌಧ ಶತಮಾನೋತ್ಸವ ಆಚರಣೆಗೆ ಸಿದ್ಧಗೊಳ್ಳುತ್ತಿದೆ. ಸೌಧವು ಅಂದ-ಚೆಂದವಾಗುತ್ತಿದ್ದು, ಇಲ್ಲಿ ನೂತನವಾಗಿ ಅಳವಡಿಸಿರುವ ಗಾಂಧೀಜಿ ಡಿಜಿಟಲ್ ಫೋಟೋ ಗ್ಯಾಲರಿ ಎಲ್ಲರ ಗಮನ ಸೆಳೆಯಲಿದೆ. ಐತಿಹಾಸಿಕ ಸಮಾರಂಭಕ್ಕೆ ಹೇಗೆಲ್ಲ ನಡೆದಿದೆ ತಯಾರಿ ಎಂಬ ಕುತೂಹಲವೇ….. ಹಾಗಾದ್ರೆ ಈಟಿವಿ ಭಾರತ ವಿಶೇಷ ವರದಿ ಇಲ್ಲಿದೆ ನೋಡಿ.

1924ರ ಡಿ.26, 27ರಂದು ಎರಡು ದಿನಗಳ ಕಾಲ ಬೆಳಗಾವಿಯಲ್ಲಿ ಕಾಂಗ್ರೆಸ್ ಅಧಿವೇಶನ ನಡೆದಿತ್ತು. ಆ ಅಧಿವೇಶನದ ಅಧ್ಯಕ್ಷತೆ ವಹಿಸಿದ್ದು ಮಹಾತ್ಮಾ ಗಾಂಧೀಜಿ. ಬಾಪೂಜಿ ಅಧ್ಯಕ್ಷತೆ ವಹಿಸಿದ ಏಕೈಕ ಅಧಿವೇಶನ ಇದು. ಬೆಳಗಾವಿ ಟಿಳಕವಾಡಿ ಪ್ರದೇಶದ ಸ್ಥಳದಲ್ಲಿ ವಿಜಯನಗರ ಎಂದು ನಾಮಕರಣ ಮಾಡಿದ್ದ ಜಾಗದಲ್ಲಿ ಅಧಿವೇಶನ ಜರುಗಿತ್ತು. ಅಲ್ಲಿಯೇ ಬಾವಿಯೊಂದನ್ನು ನಿರ್ಮಿಸಲಾಗಿತ್ತು. ಈಗಲೂ‌ ಅದು ಅಧಿವೇಶನಕ್ಕೆ ಸಾಕ್ಷಿಯಾಗಿ ನಿಂತಿದೆ.


Spread the love

About Laxminews 24x7

Check Also

ಭಾರತದ ಮುಂದಿನ ಸೇನಾ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಜನರಲ್ ಧೀರಜ್ ಸೇಠ್ ನೇಮಕ

Spread the loveನವದೆಹಲಿ: ಭಾರತದ ಮುಂದಿನ ಸೇನಾ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಜನರಲ್ ಧೀರಜ್ ಸೇಠ್  ಅವರನ್ನ ಕೇಂದ್ರ ಸರ್ಕಾರ ನೇಮಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ