Breaking News

ಸರ್ಕಾರಿ ಶಾಲೆಗಳಲ್ಲಿ ಸುಮಾರು 60 ಸಾವಿರ ಶಿಕ್ಷಕರ ಕೊರತೆ

Spread the love

ಬೆಂಗಳೂರು, ಡಿಸೆಂಬರ್ 23: ಕರ್ನಾಟಕದ ಸರ್ಕಾರಿ ಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಉಳಿದಿವೆ ಎಂದು ವರದಿಯಾಗಿದೆ. ಈ ಪೈಕಿ ಪ್ರಾಥಮಿಕ ಶಾಲೆಗಳಲ್ಲಿ 50,067 ಹಾಗೂ ಪ್ರೌಢಶಾಲೆಗಳಲ್ಲಿ 9,705 ಹುದ್ದೆಗಳು ಖಾಲಿ ಇವೆ. ಅಲ್ಲದೆ, 6,158 ಶಾಲೆಗಳು ಕೇವಲ ಒಬ್ಬ ಶಿಕ್ಷಕರಿಂದ ನಿರ್ವಹಿಸಲ್ಪಡುತ್ತಿವೆ ಎಂಬುದು ತಿಳಿದುಬಂದಿದೆ.

ರಾಜ್ಯದಲ್ಲಿ ವ್ಯಾಪಕ ಶಿಕ್ಷಕರ ಕೊರತೆ ಇದೆ. ಜತೆಗೆ, ಸೌಲಭ್ಯಗಳ ಕೊರತೆಗಳಿಂದಾಗಿ ಇರುವ ಶಿಕ್ಷಕರನ್ನೂ ಆಕರ್ಷಿಸಲು ಸರ್ಕಾರ ವಿಫಲವಾಗಿದೆ. ಇದು ಪ್ರಾಥಮಿಕದಿಂದ ಪ್ರೌಢಶಾಲೆಯವರೆಗೆ ಎಲ್ಲಾ ಹಂತಗಳಲ್ಲಿ ಶೈಕ್ಷಣಿಕ ಗುಣಮಟ್ಟವನ್ನು ನಾಶಪಡಿಸುತ್ತಿದೆ ಎಂದು ಶಿಕ್ಷಣತಜ್ಞರು ಅಭಿಪ್ರಾಯಪಟ್ಟಿರುವುದಾಗಿ ‘ದಿ ನ್ಯೂ ಇಂಡಿಯನ್’ ಎಕ್ಸ್​​ಪ್ರೆಸ್ ವರದಿ ಮಾಡಿದೆ.

ಕೇರಳ ಮಾದರಿ ಅನುಸರಿಸಲು ಶಿಕ್ಷಣ ತಜ್ಞರ ಸಲಹೆ

ಸಮಗ್ರ ಶೈಕ್ಷಣಿಕ ಅಭಿವೃದ್ಧಿಗಾಗಿ ಕೇರಳ ಮಾದರಿಯನ್ನು ಕರ್ನಾಟಕ ಅನುಸರಿಸಬೇಕು ಎಂದು ತಜ್ಞರು ಸಲಹೆ ನೀಡಿರುವುದಾಗಿಯೂ ವರದಿ ಉಲ್ಲೇಖಿಸಿದೆ. ಶಾಲೆಗಳ ಗುಣಮಟ್ಟ ಹೆಚ್ಚಿಸಲು ಐದು ವರ್ಷಗಳಲ್ಲಿ 10,000 ಕೋಟಿ ರೂ.ಗಳನ್ನು ಕೇರಳ ಸರ್ಕಾರ ಮೀಸಲಿಟ್ಟಿದೆ ಎಂದು ತಜ್ಞರು ತಿಳಿಸಿದ್ದಾರೆ. ಶಿಕ್ಷಕರ ಕೊರತೆಯು ಶಿಕ್ಷಣದ ಹಕ್ಕಿನ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಅವರು ಪ್ರತಿಪಾದಿಸಿದ್ದಾರೆ. ಪ್ರಾಥಮಿಕ ಶಾಲೆಗಳಲ್ಲಿ ಪ್ರತಿ 30 ವಿದ್ಯಾರ್ಥಿಗಳಿಗೆ ಒಬ್ಬ ಶಿಕ್ಷಕ ಮತ್ತು ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ಪ್ರತಿ 35 ವಿದ್ಯಾರ್ಥಿಗಳಿಗೆ ಒಬ್ಬ ಶಿಕ್ಷಕ ಕಡ್ಡಾಯವಾಗಿರಬೇಕು ಎಂದು ಅವರು ಹೇಳಿದ್ದಾರೆ.


Spread the love

About Laxminews 24x7

Check Also

ತಂದೆಗೆ ಲಿವರ್ ದಾನ ಮಾಡಿ ಮಹಾದಾನಿ ಆದ ಮಗ

Spread the loveಬೆಳಗಾವಿ: ಲಿವರ್ ಸಂಪೂರ್ಣವಾಗಿ ನಿಷ್ಕ್ರೀಯವಾಗಿ ಜೀವನ್ಮರಣದ ನಡುವೆ ಹೋರಾಡುತ್ತಿದ್ದ ರೋಗಿಗೆ ಯಶಸ್ವಿ ಲಿವರ್ ಕಸಿ ಶಸ್ತ್ರಚಿಕಿತ್ಸೆಯನ್ನು ನೆರವೇರಿಸಿ ಜೀವವನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ