ಘಟಪ್ರಭಾ: ನಲ್ಲಾನಟ್ಟಿ ಗ್ರಾಮ ಹಿಂದುಳಿದ ಸಮಾಜದ ವತಿಯಿಂದ ಕೂಡಿದ್ದರು ಸಹ ತಮ್ಮ ಸತತ ಪರಿಶ್ರಮ ಮೂಲಕ ಆರ್ಥಿಕವಾಗಿ, ಶೈಕ್ಷಣಿಕವಾಗಿ, ಧಾರ್ಮಿಕವಾಗಿ ಬೆಳೆಯುವ ಮೂಲಕ ಗ್ರಾಮದ ಮಹಾಲಕ್ಷ್ಮೀದೇವಿ ಆವರಣದಲ್ಲಿ ಹಲವಾರು ದೇವಸ್ಥಾನಗಳನ್ನು ನಿರ್ಮಾಣ ಮಾಡುವ ಮೂಲಕ ತಾಲೂಕಿಗೆ ಮಾದರಿಯಾಗಿದ್ದಾರೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ಗ್ರಾಮಸ್ಥರ ಕಾರ್ಯವನ್ನು ಶ್ಲಾಘಿಸಿದರು.
ಸೋಮವಾರ ಡಿ-23 ರಂದು ತಾಲೂಕಿನ ನಲ್ಲಾನಟ್ಟಿ ಗ್ರಾಮದ ಶ್ರೀ ಲಕ್ಷ್ಮೀದೇವಿ ದೇವಸ್ಥಾನದ ಹತ್ತಿರ ರಾಜ್ಯಸಭಾ ಸಂಸದರ ಸ್ಥಳೀಯ ಪ್ರದೇಶಾಭಿವೃದ್ದಿ ಯೋಜನೆಯಡಿ ನಿರ್ಮಿಸಿರುವ ಸಮುದಾಯ ಭವನವನ್ನು ಉದ್ಘಾಟಿಸಿ ಮಾತನಾಡಿದ ಸಂಸದ ಈರಣ್ಣ ಕಡಾಡಿ ಅವರು ಗ್ರಾಮದೇವತೆ ಲಕ್ಷ್ಮೀದೇವಿ ದೇವಸ್ಥಾನವನ್ನು ಜಿರ್ಣೋದ್ದಾರ ಮಾಡಿರುವುದು ಈ ಭಾಗದ ಭಕ್ತರಿಗೆ ಅನುಕೂಲವಾಗಲಿದೆ. ಇಂತಹ ಮಹತ್ಕಾರ್ಯಕ್ಕೆ ಗ್ರಾಮದ ಜನರು ಕೈಜೋಡಿಸಿ ಶ್ರದ್ದಾಭಕ್ತಿಯಿಂದ ನಿಸ್ವಾರ್ಥತೆಯಿಂದ ಸೇವೆ ಸಲ್ಲಿಸಿದಾಗ ಮಾತ್ರ ದೇವಸ್ಥಾನದ ಅಭಿವೃದ್ಧಿ ಆಗಲು ಸಾಧ್ಯ ಎಂದರು.