ಇಂದು ನಡೆದ ಹುಬ್ಬಳ್ಳಿ-ಧಾರವಾಡದ 6 ಲೈನ್ ಬೈಪಾಸ್ ರಸ್ತೆ ಕಾಮಗಾರಿ ಪ್ರಗತಿ ಪರಿಶೀಲನೆಯ ಪ್ರಮುಖ ಅಂಶಗಳು.
– ಹುಬ್ಬಳ್ಳಿ ಧಾರವಾಡ ಬೈಪಾಸ್ ರಸ್ತೆ ಅಗಲೀಕರಣ ಹಾಗೂ ಉನ್ನತ್ತೀಕರಣ ಕಾಮಗಾರಿ ಭರದಿಂದ ಸಾಗಿದ್ದು ಜೂನ್ ವೇಳೆಗೆ ಮುಕ್ತಾಯವಾಗಲಿದೆ.
– ಬೈಪಾಸ್ ರಸ್ತೆ ನಿರ್ಮಾಣ ಕಾಮಗಾರಿಯಲ್ಲಿನ ರೈಲ್ವೆ ಸೇತುವೆ ಹಾಗೂ ಗಬ್ಬೂರು ಸೇತುವೆ 2025ರ ಸೆಪ್ಟೆಂಬರ್ ತಿಂಗಳಲ್ಲಿ ಪೂರ್ಣಗೊಳ್ಳಲಿದೆ. ಹೆದ್ದಾರಿಯ ಪಕ್ಕದಲ್ಲಿ ಅವಶ್ಯವಿರುವಲ್ಲಿ ಸರ್ವಿಸ್ ರಸ್ತೆ ಹಾಗೂ ಕೆಳ ಸೇತುವೆಗಳನ್ನು ಕೂಡ ನಿರ್ಮಿಸಲಾಗುತ್ತಿದೆ.
-ವಿಮಾನ ನಿಲ್ದಾಣ ರಸ್ತೆಯ ಇನ್ಫೋಸಿಸ್ ಮುಂಭಾಗದಲ್ಲಿಗೆ ಹುಬ್ಬಳ್ಳಿ ಧಾರವಾಡ ಬೈಪಾಸ್ ಹೆದ್ದಾರಿ ಬಂದು ಸೇರಲಿದ್ದು ಹುಬ್ಬಳ್ಳಿಗೆ ಆಗಮಿಸುವವರಿಗೆ ಅತ್ಯಾಕರ್ಷಕ ಸ್ವಾಗತ ಕೋರಲಿದೆ.
– ಈ ಸ್ಥಳದಲ್ಲಿ ವೃತ್ತವನ್ನು ನಿರ್ಮಿಸಿ, ಪೌಂಟೇನ್ ಮಾದರಿಯನ್ನು ಅಳವಡಿಸಿ ಸುಂದರ ತಾಣವನ್ನು ನಿರ್ಮಿಸಲು ಕ್ರಮ ಕೈಗೊಳ್ಳುವಂತೆ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಿದ ಅಧಿಕಾರಿಗಳಿಗೆ ಸೂಚಿಸಲಾಗಿದೆ.
ಈ ಕಾರ್ಯಗಳಿಗೆ ಬೇಕಾಗುವ ಹೆಚ್ಚುವರಿ ಅನುದಾನವನ್ನು ಈಗಾಗಲೇ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವರಾದ ಶ್ರೀ ನಿತಿನ್ ಗಡ್ಕರಿ (Nitin Gadkari) ನೀಡಿಲು ಒಪ್ಪಿಗೆ ಸೂಚಿಸಿದ್ದು ನಾವು ಈ ಯೋಜನೆಗೆ ಅನುಮತಿ ಪಡೆದಿದ್ದು ಈಗ ಕಾರ್ಯರೂಪಕ್ಕೆ ತರಲಾಗುವದು.
ಇಂದಿನ ಪರಿಶೀಲನಾ ಸಭೆಯಲ್ಲಿಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ., ಪೊಲೀಸ್ ಆಯುಕ್ತರಾದ ಎನ್ ಶಶಿಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಗೋಪಾಲ ಬ್ಯಾಕೋಡ, ಡಿಸಿಪಿ ರವೀಶ್ ಆರ್., ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕರಾದ ಭುವನೇಶ್ವರಕುಮಾರ ಸೇರಿದಂತೆ ಅಧಿಕಾರಿಗಳು ಇತರರು ಉಪಸ್ಥಿತರಿದ್ದರು.