Breaking News

ಮುಖ್ಯಮಂತ್ರಿಗಳ ಪೂರ್ವಾನುಮತಿ ಇಲ್ಲದೇ ಸರ್ಕಾರಿ ನೌಕರರನ್ನು ವರ್ಗಾವಣೆ ಮಾಡಿದರೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕ್ರಮ

Spread the love

ಬೆಂಗಳೂರು: ಸರ್ಕಾರಿ ನೌಕರರ ವರ್ಗಾವಣಾ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸರ್ಕಾರ ಆದೇಶ ಹೊರಡಿಸಿದೆ. ಸಿಎಂ ಅನುಮೋದನೆ ಪಡೆಯದೇ ವರ್ಗಾವಣೆ ಮಾಡಿದರೆ ಶಿಸ್ತು ಕ್ರಮ ಕೈಗೊಳ್ಳುವುದಾಗಿ ಸೂಚನೆ ನೀಡಿದೆ.

ವಿಶೇಷ ಕಾರಣಗಳಿಗೆ ಮಾಡುವ ವಾರ್ಷಿಕ ವರ್ಗಾವಣೆಗಳ ಸಂಖ್ಯೆಯನ್ನು ಕನಿಷ್ಠ ಮಟ್ಟಕ್ಕೆ ಸೀಮಿತಗೊಳಿಸಿ. ನಿರ್ದಿಷ್ಟ ಪ್ರಕರಣದಲ್ಲಿ ವರ್ಗಾವಣೆ ಅವಶ್ಯಕ ಎನಿಸಿದ್ದಲ್ಲಿ ಅಂಥ ಪ್ರಕರಣಗಳನ್ನು ಚಾಚೂತಪ್ಪದೇ ಮುಖ್ಯಮಂತ್ರಿಯವರಿಗೆ ಸಲ್ಲಿಸಿ, ಅನುಮೋದನೆ ಪಡೆದು ವರ್ಗಾವಣೆ ಮಾಡಬೇಕು ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಹೊರಡಿಸಿದ ಆದೇಶದಲ್ಲಿ ತಿಳಿಸಿದೆ.

ಜೂನ್ 25, 2024ರ ಸರ್ಕಾರಿ ಆದೇಶದಲ್ಲಿ ಸರ್ಕಾರಿ ನೌಕರರ ವರ್ಗಾವಣೆಗಳ ಬಗ್ಗೆ ಮಾರ್ಗಸೂಚಿಗಳನ್ನು ನೀಡಲಾಗಿದೆ. ಆ ಆದೇಶದಲ್ಲಿ ಸಾರ್ವತ್ರಿಕ ವರ್ಗಾವಣೆ ಅವಧಿಯ ನಂತರದಲ್ಲಿ ಮಾಡುವ ವರ್ಗಾವಣೆಗಳ ಬಗ್ಗೆ ಸ್ಪಷ್ಟಪಡಿಸಲಾಗಿದೆ. 25.06.2024, 10.07.2024 ಮತ್ತು 16.07.2024ರ ಸರ್ಕಾರಿ ಆದೇಶಗಳಲ್ಲಿ 2024 -25ನೇ ಸಾಲಿಗೆ ಗ್ರೂಪ್-ಎ, ಬಿ, ಸಿ ಮತ್ತು ಡಿ ವರ್ಗದ ಅಧಿಕಾರಿ/ನೌಕರರಿಗೆ ಅನ್ವಯವಾಗುವಂತೆ ಒಂದು ಜೇಷ್ಠತಾ ಘಟಕದಲ್ಲಿ ಕಾರ್ಯನಿರತ ವೃಂದ ಬಲದ ಶೇ.6ರಷ್ಟನ್ನು ಮೀರದಂತೆ 25.06.2024ರಿಂದ 31.07.2024 ರವರೆಗೆ ಸಾರ್ವತ್ರಿಕ ವರ್ಗಾವಣೆಗಳನ್ನು ಕೈಗೊಳ್ಳಲು ಆಯಾ ಇಲಾಖಾ ಸಚಿವರಿಗೆ ಅಧಿಕಾರ ನೀಡಲಾಗಿತ್ತು.

31.07.2024ರಂದು 2024ನೇ ಸಾಲಿನ ಸಾರ್ವತ್ರಿಕ ವರ್ಗಾವಣೆ ಅವಧಿ ಮುಕ್ತಾಯಗೊಂಡಿದೆ. ಆದರೆ ನಿಗದಿತ ವರ್ಗಾವಣಾ ಅವಧಿಯ ನಂತರವೂ ಇಲಾಖಾ ಹಂತದಲ್ಲಿ ವರ್ಗಾವಣೆಗಳನ್ನು ಜಾರಿಗೊಳಿಸಿ ನಂತರ ಘಟನೋತ್ತರ ಅನುಮೋದನೆಗಾಗಿ ಪ್ರಸ್ತಾವನೆಗಳನ್ನು ಮುಖ್ಯಮಂತ್ರಿಯವರಿಗೆ ಸಲ್ಲಿಸಲಾಗುತ್ತಿದೆ. ಇದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದು ಆದೇಶದಲ್ಲಿ ತಿಳಿಸಿದೆ.


Spread the love

About Laxminews 24x7

Check Also

ತಂದೆಗೆ ಲಿವರ್ ದಾನ ಮಾಡಿ ಮಹಾದಾನಿ ಆದ ಮಗ

Spread the loveಬೆಳಗಾವಿ: ಲಿವರ್ ಸಂಪೂರ್ಣವಾಗಿ ನಿಷ್ಕ್ರೀಯವಾಗಿ ಜೀವನ್ಮರಣದ ನಡುವೆ ಹೋರಾಡುತ್ತಿದ್ದ ರೋಗಿಗೆ ಯಶಸ್ವಿ ಲಿವರ್ ಕಸಿ ಶಸ್ತ್ರಚಿಕಿತ್ಸೆಯನ್ನು ನೆರವೇರಿಸಿ ಜೀವವನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ