ಬೆಳಗಾವಿ: “ನಮ್ಮ ಪಂಚಮಸಾಲಿ ಮೀಸಲಾತಿ ಹೋರಾಟವನ್ನು ಮತ್ತಷ್ಟು ಗಟ್ಟಿಗೊಳಿಸಲು ಹಾಗೂ ಸರ್ಕಾರದ ದೌರ್ಜನ್ಯ ನೀತಿಯ ವಿರುದ್ಧ ಜನರನ್ನು ಜಾಗೃತಿಗೊಳಿಸಲು, ರಾಜ್ಯದ ಪ್ರತೀ ಗ್ರಾಮಗಳಿಗೂ ಭೇಟಿ ನೀಡುವ ಉದ್ದೇಶದಿಂದ ಪಂಚಮಸಾಲಿ ಪ್ರತಿಜ್ಞಾ ಕ್ರಾಂತಿ ಅಭಿಯಾನ ಜ.14ರಂದು ಕೂಡಲಸಂಗಮದಿಂದ ಆರಂಭಿಸಲಾಗುತ್ತದೆ” ಎಂದು ಲಿಂಗಾಯತ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು.
ಬೆಳಗಾವಿಯ ಕನ್ನಡ ಸಾಹಿತ್ಯ ಭವನದಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, “ಪ್ರತಿ ಗ್ರಾಮಗಳಿಗೆ ಭೇಟಿ ನೀಡಿ ಸಂವಾದ, ಸಂಧಾನ, ಸಂಘರ್ಷ ನೀತಿಯ ಮೂಲಕ ಗ್ರಾಮ ಸಭೆಗಳನ್ನು ನಡೆಸಿ ಜಾಗೃತಿ ಮೂಡಿಸಲಾಗುವುದು. ತಾಲೂಕಿನಲ್ಲಿಯೂ ಸಭೆಗಳನ್ನು ನಡೆಸಿ, ಜನರ ಸಲಹೆ ಸೂಚನೆಗಳನ್ನು ಸಂಗ್ರಹಿಸಲಾಗುವುದು. ಬಳಿಕ ಪಂಚಮಸಾಲಿ ಹೋರಾಟದ ಮುಂದಿನ ರೂಪುರೇಷೆಗಳನ್ನು ಸಿದ್ಧದ್ದಪಡಿಸಲಾಗುವುದು” ಎಂದರು.