Breaking News

ಕ್ರೀಡಾಕೂಟ ಲಾಂಛನ ಬಿಡುಗಡೆ: ಕರ್ನಾಟಕ ಕ್ರೀಡಾಕೂಟ-2025ರ ಲಾಂಛನ ಬಿಡುಗಡೆಯನ್ನು ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ನೆರವೇರಿಸಿದರು.

Spread the love

ಬೆಂಗಳೂರು : 2025ರ ಕರ್ನಾಟಕ ಕ್ರೀಡಾಕೂಟವನ್ನು ಮಂಗಳೂರು ಹಾಗೂ ಉಡುಪಿ ಜಿಲ್ಲೆಗಳಲ್ಲಿ ಆಯೋಜಿಸುತ್ತಿದ್ದು, ವ್ಯವಸ್ಥಿತ ಏರ್ಪಾಡುಗಳನ್ನು ಮಾಡಲು ಮಂಗಳೂರು ಹಾಗೂ ಉಡುಪಿ ಜಿಲ್ಲಾಡಳಿತಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು.

ಜನವರಿ 17ರಿಂದ 23ರವರೆಗೆ ಮಂಗಳೂರು ಮತ್ತು ಉಡುಪಿ ಜಿಲ್ಲೆಗಳಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ಒಲಂಪಿಕ್ ಸಂಸ್ಥೆ ಮತ್ತು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾಡಳಿತ ಸಹಯೋಗದಲ್ಲಿ ಕ್ರೀಡಾಕೂಟ ಆಯೋಜಿಸಲಾಗುತ್ತಿದ್ದು, ಜನವರಿ 17ರಂದು ಮಂಗಳೂರಿನಲ್ಲಿ ಉದ್ಘಾಟನೆ ನಡೆಯಲಿದೆ. ಸುಮಾರು 25 ವಿವಿಧ ಕ್ರೀಡೆಗಳಲ್ಲಿ ಸ್ಪರ್ಧೆಗಳನ್ನು ಆಯೋಜಿಸುತ್ತಿದ್ದು ಕ್ರೀಡಾಕೂಟವನ್ನು ವ್ಯವಸ್ಥಿತವಾಗಿ ಆಯೋಜಿಸಲು ಅಧಿಕಾರಿಗಳಿಗೆ ಮುಖ್ಯಮಂತ್ರಿಗಳು ಸೂಚಿಸಿದರು.

ಕ್ರೀಡಾಕೂಟದಲ್ಲಿ 3750 ಕ್ರೀಡಾಪಟುಗಳು ಹಾಗೂ 750 ತಾಂತ್ರಿಕ ಅಧಿಕಾರಿಗಳು ಮತ್ತು ಸಂಘಟಕರು ಸೇರಿದಂತೆ ಅಂದಾಜು 4,500 ಜನರು ಭಾಗವಹಿಸಲಿದ್ದು ಊಟ – ತಿಂಡಿ, ವಸತಿ, ಸಾರಿಗೆ ವ್ಯವಸ್ಥೆಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಲು ಅಧಿಕಾರಿಗಳಿಗೆ ಸೂಚಿಸಿದರು. ಮಂಗಳೂರಿನಲ್ಲಿ 12 ಕ್ರೀಡೆಗಳು ಹಾಗೂ ಉಡುಪಿ ಮತ್ತು ಮಣಿಪಾಲಗಳಲ್ಲಿ 11 ಕ್ರೀಡೆಗಳು ಆಯೋಜನೆಗೊಳ್ಳಲ್ಲಿದ್ದು, ಶೂಟಿಂಗ್ ಮತ್ತು ಜಿಮ್ನಾಸ್ಟಿಕ್ ಕ್ರೀಡೆಗಳನ್ನು ಬೆಂಗಳೂರಿನಲ್ಲಿ ಆಯೋಜಿಸಲಾಗುವುದು.


Spread the love

About Laxminews 24x7

Check Also

ತಂದೆಗೆ ಲಿವರ್ ದಾನ ಮಾಡಿ ಮಹಾದಾನಿ ಆದ ಮಗ

Spread the loveಬೆಳಗಾವಿ: ಲಿವರ್ ಸಂಪೂರ್ಣವಾಗಿ ನಿಷ್ಕ್ರೀಯವಾಗಿ ಜೀವನ್ಮರಣದ ನಡುವೆ ಹೋರಾಡುತ್ತಿದ್ದ ರೋಗಿಗೆ ಯಶಸ್ವಿ ಲಿವರ್ ಕಸಿ ಶಸ್ತ್ರಚಿಕಿತ್ಸೆಯನ್ನು ನೆರವೇರಿಸಿ ಜೀವವನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ