ನಟ ಶಿವರಾಜ್ಕುಮಾರ್ ಅವರಿಗೆ ಅಮೆರಿಕದಲ್ಲಿ ಇಂದು (ಡಿಸೆಂಬರ್ 24) ಶಸ್ತ್ರ ಚಿಕಿತ್ಸೆ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಅವರು ಬೇಗ ಚೇತರಿಸಿಕೊಳ್ಳಲಿ ಎಂದು ಅನೇಕರು ಹಾರೈಸಿದ್ದಾರೆ.
ಅವರ ಆರೋಗ್ಯಕ್ಕಾಗಿ ಹಲವು ಕಡೆಗಳಲ್ಲಿ ಹೋಮ, ಪೂಜೆ ಮಾಡಲಾಗಿದೆ. ಸಿಎಂ ಸಿದ್ದರಾಮಯ್ಯ ಅವರು ದೂರವಾಣಿ ಮೂಲಕ ಶಿವರಾಜ್ಕುಮಾರ್ ಜೊತೆ ಮಾತನಾಡಿ ಆರೋಗ್ಯ ವಿಚಾರಿಸಿದ್ದಾರೆ.
ಈ ಬಗ್ಗೆ ಅವರು ‘ಎಕ್ಸ್’ (ಟ್ವಿಟರ್) ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.ಅನಾರೋಗ್ಯದ ನಿಮಿತ್ತ ಇಂದು ಶಸ್ತ್ರಚಿಕಿತ್ಸೆಗೆ ಒಳಗಾಗುತ್ತಿರುವ ಕನ್ನಡ ಚಿತ್ರರಂಗದ ಖ್ಯಾತ ನಟ ಶಿವರಾಜ್ಕುಮಾರ್ ಅವರಿಗೆ ಕರೆಮಾಡಿ ಮಾತನಾಡಿ, ಶೀಘ್ರ ಗುಣಮುಖರಾಗುವಂತೆ ಹಾರೈಸಿದ್ದೇನೆ.
ನನಗೆ ತಿಳಿದಂತೆ ಶಿವರಾಜ್ಕುಮಾರ್ ಅವರ ಆತ್ಮವಿಶ್ವಾಸ, ಧೈರ್ಯ ಮತ್ತು ಸಹೃದಯತೆ ಅವರನ್ನು ಈ ಹೋರಾಟದಲ್ಲಿ ಗೆಲ್ಲಿಸಿಕೊಂಡು ಬರಲಿದೆ ಎಂಬ ವಿಶ್ವಾಸವಿದೆ’ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.